ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಚುನಾವಣಾ ಜ್ಞಾನ ವಿದ್ಯಾರ್ಥಿಗಳಿಗೆ ದೊರಕುವುದು ಅಗತ್ಯ : ಗಣೇಶ್ ಪ್ರಸಾದ್ ಎ

ಪುತ್ತೂರು: ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆ ಎಲ್ಲಾ ಪ್ರಜೆಗಳ ಹಕ್ಕು ಹಾಗೂ ಕರ್ತವ್ಯ. ಹಾಗಾಗಿ ಪ್ರತಿಯೊಬ್ಬನೂ ಚುನಾವಣಾ ಪ್ರಕ್ರಿಯೆಯನ್ನು ಅರಿತಿರಬೇಕು. ಶಾಲಾ- ಕಾಲೇಜು ದಿನಗಳಲ್ಲಿಯೇ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅವಕಾಶವನ್ನು ಸದುಪಯೋಗಪಡಿಸಿಕೊಂಡಾಗ ಚುನಾವಣಾ ಜ್ಞಾನ ಒಡಮೂಡುವುದಕ್ಕೆ ಸಾಧ್ಯ ಎಂದು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ 2022ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜುಗಳಲ್ಲಿ ನಡೆಯುವ ಚುನಾವಣೆಗಳು ಭವಿಷ್ಯದಲ್ಲಿ ನಾಯಕರಾಗಲು ಪ್ರೇರಣೆಯನ್ನು ನೀಡುತ್ತವೆ. ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸುವ ಪ್ರೌಢಿಮೆಯನ್ನು ಬೆಳೆಸುತ್ತವೆ. ಹಾಗೆಯೇ ಸೋಲು ಗೆಲುವು ಎರಡನ್ನೂ ಒಂದೇ ರೀತಿ ನಿಭಾಯಿಸುವ ಪಾಠವನ್ನು ಈ ಚುನಾವಣೆಗಳು ಕಲಿಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಚುನಾವಣೆಯನ್ನು ಪ್ರತಿಷ್ಟೆಯಾಗಿ ಸ್ವೀಕರಿಸದೆ ಅನುಭವದ ನೆಲೆಯಲ್ಲಿ ಗಮನಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ, ಶಿಕ್ಷಣ ಸಂಸ್ಥೆಯೊಂದರ ಬೆಳವಣಿಗೆಯಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಬಹಳ ಪರಿಣಾಮಕಾರಿಯಾದದ್ದು. ವಿದ್ಯಾರ್ಥಿ ಸಂಘವು ಕಾಲೇಜಿನ ಏಳಿಗೆಗಾಗಿ ದುಡಿಯಬೇಕು. ಸಂಸ್ಥೆಯನ್ನು ಉನ್ನತಿಯತ್ತ ಕೊಂಡೊಯ್ಯುವ ಕಾರ್ಯವನ್ನು ಮಾಡಬೇಕು. ಚುನಾವಣಾ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಡೆದುಕೊಳ್ಳುವ ರೀತಿ ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ. ಅಂಬಿಕಾ ಸಂಸ್ಥೆಯ ವಿದ್ಯಾರ್ಥಿಗಳು ಮಾದರಿಯಾಗಿ ವರ್ತಿಸಿರುವುದು ಹೆಮ್ಮೆಯ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾದ ತೃತೀಯ ಬಿ.ಎ ವಿದ್ಯಾರ್ಥಿನಿ ಸಾಯಿಶ್ವೇತ, ಕಾರ್ಯದರ್ಶಿಯಾಗಿ ಆಯ್ಕೆಯಾದ ದ್ವಿತೀಯ ಬಿ.ಎ ವಿದ್ಯಾರ್ಥಿನಿ ಅನಘ ಹಾಗೂ ತರಗತಿ ಪ್ರತಿನಿಧಿಗಳಾದ ಕಾರ್ತಿಕ್, ಪ್ರಕೃತಿ, ಸಮೀಕ್ಷಾ, ನವನೀತ್, ಅನನ್ಯಲಕ್ಷ್ಮೀ, ಶ್ರಾವ್ಯಾ ಸಂಸ್ಕ್ರತದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕಾಲೇಜಿನ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಪ್ರಮಾಣ ವಚನವನ್ನು ಬೋಧಿಸಿದರು.

ಚುನಾವಣಾ ಅಧಿಕಾರಿ ಚಂದ್ರಕಾಂತ್ ಗೋರೆ ಸ್ವಾಗತಿಸಿ, ವಿದ್ಯಾರ್ಥಿನಿ ಮಹಿಮಾ ಪ್ರಾರ್ಥಿಸಿದರು. ನೂತನ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಸಾಯಿಶ್ವೇತ ವಂದಿಸಿ, ಭೌತಶಾಸ್ತ್ರ ಉಪನ್ಯಾಸಕ ಅಭಿಷೇಕ್ ಕಾರ್ಯಕ್ರಮ ನಿರ್ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.