
ಪುತ್ತೂರು: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಆ.೧ ರಂದು ಅಭಿನಂದನಾ ಸಮರ್ಪಣೆ ಮಾಡಲಾಯಿತು.
ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಪ್ರಧಾನ ಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಮಹಿಳಾ ಗೌಡ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ ಗೌಡ, ಕಾರ್ಯದರ್ಶಿ ವಾರಿಜಾ ಬೆಳಿಯಪ್ಪ ಗೌಡ, ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ ಕಣಜಾಲು ಅವರು ಡಾ.ಡಿ ವೀರೇಂದ್ರ ಹೆಗ್ಡೆಯವರಿಗೆ ಫಲಪುಷ್ಪ, ಶಾಲು ಹೊದೆಸಿ ಗೌರವಿಸಿದರು.