ಧಾರ್ಮಿಕ ದತ್ತಿ ಇಲಾಖೆಯ ದೇವಾಲಯದಲ್ಲಿ ಶ್ರೀವರಮಹಾಲಕ್ಷ್ಮಿ ಪೂಜೆಗೆ ಆಗಮಿಸುವ ಮಹಿಳೆಯರಿಗೆ ಅರಿಶಿಣ-ಕುಂಕುಮ, ಹಸಿರು ಬಳೆಯನ್ನು ಗೌರವರ್ಪೂಕವಾಗಿ ನೀಡಬೇಕು ಧಾರ್ಮಿಕದತ್ತಿ ಇಲಾಖಾ ಆಯುಕ್ತರ ಆದೇಶ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಶ್ರೀವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಅರಿಶಿಣ-ಕುಂಕುಮ, ಹಸಿರು ಬಳೆಯನ್ನು ಗೌರವಸೂಚಕಾಗಿ ನೀಡಬೇಕು ಎಂದು ಧಾರ್ಮಿಕದತ್ತಿ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.
ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಯರಿಗೆ /ಹೆಣ್ಣಿಗೆ ಬಹಳ ಮಹತ್ವ ಪೂರ್ಣವಾದ ಸ್ಥಾನವನ್ನು ನೀಡಿ ಗೌರವಿಸಲಾಗುತ್ತಿದ್ದು, ಪ್ರತೀ ವರ್ಷ ಶ್ರೀವರಮಹಾಲಕ್ಷ್ಮೀ ವ್ರತ, ಸ್ವರ್ಣಗೌರೀವೃತ್ತ ಮತ್ತು ನವರಾತ್ರಿಗಳಲ್ಲಿಯೂ ಸಹ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ಅದರಂತೆ ಪ್ರತಿ ವರ್ಷದ ಶ್ರಾವಣ ಮಾಸದ ಶುಕ್ಲಪಕ್ಷದ ಪೌರ್ಣಮಿಯ ಮೊದಲ ಶುಕ್ರವಾರದಂದು ಶ್ರೀವರಮಹಾಲಕ್ಷ್ಮಿ ವ್ರತ ಆಚರಿಸುವುದು ಪುರಾಣೋಕ್ತವಾಗಿದೆ. ಆ ದಿನ ಮಹಾಲಕ್ಷ್ಮಿಯನ್ನು ವಿಶೇಷವಾಗಿ ಪೂಜಿಸಿ ಪುಸಾಧಿಗಳನ್ನು ನೈವೈದ್ಯ ಮಾಡಿ ಪ್ರಸಾದವನ್ನು ಸ್ವೀಕರಿಸಿದಲ್ಲಿ ಸಕಲ ಸೌಭಾಗ್ಯಗಳೂ, ಅಷ್ಟ ಐಶ್ವರ್ಯಗಳೂ, ಚತುರ್ವಿದಫಲಗಳೂ, ಧನ ಧಾನ್ಯಧಿಗಳೂ ಲಭಿಸುತ್ತವೆ ಎಂದು ಹೇಳಲ್ಪಟ್ಟಿರುವುದರಿಂದ ಮಹಿಳೆಯರು ಈ ದಿನ ಬಹಳ ಭಕ್ತಿಭಾವಗಳಿಂದ ಮನೆಯಲ್ಲಿ ಶುದ್ಧಿಯಾಗಿ ಶ್ರೀ ವರಮಹಾಲಕ್ಷ್ಮಿಯನ್ನು ಪೂಜೆ ಮಾಡಿ, ದೇವಾಲಯಗಳಿಗೆ ದೇವರ ದರ್ಶನಾರ್ಥಿಗಳಾಗಿ ಬಂದು ದೇವರ ಪ್ರಸಾದಗಳಾದ ಅರಿಶಿನ, ಕುಂಕುಮ, ಹೂವು ಮುಂತಾದ ಪ್ರಸಾದಗಳನ್ನು ಸ್ವೀಕರಿಸುವ ಸಂಪುದಾಯವು ಸಹ ಇರುತ್ತದೆ.
ಆದುದರಿಂದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ನಡೆದ ನಿರ್ಣಯದಂತೆ ನಾಡಿನ ಸಮಸ್ತ ಮಹಿಳೆಯರನ್ನು ಗೌರವಿಸುವ ಸಲುವಾಗಿ ಹಾಗೂ ಶ್ರೀವರಮಹಾಲಕ್ಷ್ಮೀಯವರ ಕೃಪಾ ಕಟಾಕ್ಷವು ಲಭಿಸಲೆಂದು ಶ್ರೀ ವರಮಹಾಲಕ್ಷ್ಮಿ ವ್ರತದ ದಿನದಂದು ಅಧಿಸೂಚಿತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಆಯಾಯ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡುವುದು ಸೂಕ್ತವಾಗಿರುತ್ತದೆ.
ಅದರಂತೆ ಮುಂಬರುವ ಆ.5ರ ಶ್ರೀವರಮಹಾಲಕ್ಷ್ಮಿ ವ್ರತದ ದಿನದಂದು ಎಲ್ಲಾ ಅಧಿಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಆಯಾಯ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು ದೇವರ ಮುಂದೆ ಇಟ್ಟು ಪೂಜಿಸಿ ಗೌರವ ಪೂರ್ವಕವಾಗಿ ಸ್ತ್ರೀಯವರಿಗೆ ನೀಡುವುದು ಹಾಗೂ ಅದರ ವೆಚ್ಚವನ್ನು ಆಯಾಯ ದೇವಸ್ಥಾನದ ನಿಧಿಯಿಂದ ನಿಯಮಾನುಸಾರ ಭರಿಸಬೇಕು.
ಪ್ರಸಾದ ರೂಪವಾದ ಅರಿಶಿನ ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಿ, ಇದರೊಂದಿಗೆ ಲಗತ್ತಿಸಿರುವ ಮಾದರಿಯಲ್ಲಿ ಲಕೋಟೆಯನ್ನು ತಯಾರಿಸಿಕೊಂಡು ದೇವಾಲಯಕ್ಕೆ ಆಗಮಿಸುವ ಸ್ತ್ರೀಯರಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.