ಮುಂದುವರಿದ ಮಳೆ:ಕಡಬ, ಸುಳ್ಯದ ಶಾಲಾ ಕಾಲೇಜುಗಳಿಗೆ ಇಂದು ರಜೆ

0

ಪುತ್ತೂರು: ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ, ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆ.೩ರಂದು ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.ಆ.೩ರಂದು ಸುಳ್ಯ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.

ಆ.೧ರಂದು ಮಳೆಯ ಆರ್ಭಟಕ್ಕೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸೇರಿದಂತೆ ಹಲವೆಡೆ ಹಾನಿ ಸಂಭವಿಸಿದೆ.ಸುಬ್ರಹ್ಮಣ್ಯದಲ್ಲಿ ಗುಡ್ಡ ಜರಿದು ಮನೆ ಮೇಲೆ ಬಿದ್ದು ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here