ಮಳೆ ಹಾನಿ:ಜಿಲ್ಲಾಡಳಿತದಿಂದ ಅಗತ್ಯ ಪರಿಹಾರ ಕ್ರಮ ಸಿಎಂಗೆ ಡಿ.ಸಿ.ಮಾಹಿತಿ ; ತಕ್ಷಣ ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ

0

  • ಕಡಬ, ಸುಳ್ಯ ತಾಲೂಕಿನಲ್ಲಿ ತೀವ್ರ ಮಳೆ
  • 30 ಮನೆಗಳಿಗೆ ಹಾನಿ 5 ಮನೆಗಳಿಗೆ ಸಂಪೂರ್ಣ ಹಾನಿ
  • ಗುಡ್ಡ ಕುಸಿದು ಇಬ್ಬರು ಬಾಲಕಿಯರ ಸಾವು
  • 3 ಪ್ರಾಣಿಗಳು ನೀರು ಪಾಲು
  • 23 ಕಡೆ ರಸ್ತೆಗಳಿಗೆ ಹಾನಿ

ಮಂಗಳೂರು:ಜಿಲ್ಲೆಯಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಹಾನಿಗೊಳಗಾದ ನಾಗರಿಕರಿಗೆ ಜಿಲ್ಲಾಡಳಿತದಿಂದ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದ್ದಾರೆ.

ಆ.2ರಂದು ಬೆಂಗಳೂರಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಮಳೆ ಪೀಡಿತ 11 ಜಿಲ್ಲೆಗಳ ಜಿಲ್ಲಾಽಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವಿಡಿಯೋ ಕಾನರೆನ್ಸ್‌ನಲ್ಲಿ ಜಿಲ್ಲಾಽಕಾರಿ ಡಾ.ರಾಜೇಂದ್ರ ಕೆ.ವಿ.ಈ ಮಾಹಿತಿ ನೀಡಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ತೀವ್ರ ಮಳೆಯಾಗಿದ್ದು ಇದುವರೆಗೆ ಒಟ್ಟು 30 ಮನೆಗಳಿಗೆ ಹಾನಿಯಾಗಿದೆ.5 ಮನೆಗಳು ಸಂಪೂರ್ಣವಾಗಿ ಹಾನಿಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಪರ್ವತ ಮುಖಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ಈಗಾಗಲೇ ಪರಿಹಾರವನ್ನು ಪಾವತಿಸಲಾಗಿದೆ.3 ಪ್ರಾಣಿಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ವರದಿಯಾಗಿದೆ. ಮಳೆಯಿಂದ ಸಂಕಷ್ಟಕ್ಕೊಳಗಾದ ನಾಗರಿಕರಿಗೆ ಸೂಕ್ತ ಪರಿಹಾರ ಒದಗಿಸಲಾಗಿದೆ. ಅತಂತ್ರಗೊಂಡವರನ್ನು ಕಾಳಜಿ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಡಿ.ಸಿ.ಹೇಳಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆ ಎಸಿಎಸ್ ಐಎಸ್‌ಎನ್ ಪ್ರಸಾದ,ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣಾ ರೆಡ್ಡಿ, ಪ್ರಕೃತಿ ವಿಕೋಪ ನಿರ್ವಹಣಾ ಸೆಲ್ ಮುಖ್ಯಸ್ಥ ಮನೋಜ ಮತ್ತು ಇತರರು ಉಪಸ್ಥಿತರಿದ್ದರು.

ಆ.5ರ ವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್

ಪುತ್ತೂರು:ಸುಳ್ಯ, ಕಡಬ ತಾಲೂಕಿನಲ್ಲಿ ಆ.2ರಂದು ಮಳೆ ಮುಂದುವರಿದಿದೆ.ಜಿಲ್ಲೆಯ ಇತರೆಡೆ ಸಾಮಾನ್ಯ ಮಳೆಯಾಗಿದೆ. ಈ ಮಧ್ಯೆ ಆ.5ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆ.5ರ ಬಳಿಕ ಆರೆಂಜ್ ಅಲರ್ಟ್ ಇದೆ.ರೆಡ್ ಅಲರ್ಟ್ ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಮಳೆಯ ವಾತಾವರಣವಿತ್ತು.ಮಧ್ಯಾಹ್ನದವರೆಗೆ ಸಾಮಾನ್ಯ ಮಳೆಯಾಗಿದೆ. ಸಂಜೆಯ ಬಳಿಕ ಮೋಡ ಕವಿದ ವಾತಾವರಣವಿತ್ತು.

ಸುಬ್ರಹ್ಮಣ್ಯದಲ್ಲಿ 28.35 ಸೆ.ಮೀ ಮಳೆ:

ಆ.1ರ ಬೆಳಗ್ಗಿನಿಂದ ಮಂಗಳವಾರ ಬೆಳಗ್ಗಿನವರೆಗೆ ಸುಬ್ರಹ್ಮಣ್ಯದಲ್ಲಿ ಅತ್ಯಽಕ ಅಂದರೆ 28.35 ಸೆಂ.ಮೀ. ಮಳೆಯಾಗಿದೆ. ಸಂಪಾಜೆಯಲ್ಲಿ 14 ಸೆಂ.ಮೀ. ಮಳೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕೆಲವೆಡೆ ವಾಣಿಜ್ಯ ಸಂಕೀರ್ಣಗಳು ಹಾನಿಗೊಳಗಾಗಿವೆ,ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿ ತುಂಬಿ ಹರಿದಿದ್ದು ಆದಿ ಸುಬ್ರಹ್ಮಣ್ಯ ದೇಗುಲದ ಗರ್ಭಗುಡಿಯೊಳಗೂ ನೀರು ಹರಿದಿದೆ.ಸುಬ್ರಹ್ಮಣ್ಯಕ್ಕೆ ಹೊಂದಿಕೊಂಡಿರುವ ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಇತರೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.ಎರಡು ತಾಲೂಕುಗಳಲ್ಲಿ ಒಟ್ಟು 23 ಕಡೆ ರಸ್ತೆ ಹಾನಿಯಾಗಿದ್ದು ಅದನ್ನು ದುರಸ್ತಿ ಪಡಿಸಲು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಽಕಾರಿ ವಿವರಿಸಿದರು.ಜಿಲ್ಲಾಧಿಕಾರಿಯವರ ಮಾತುಗಳನ್ನು ಆಲಿಸಿದ ಮುಖ್ಯಮಂತ್ರಿಗಳು ತಕ್ಷಣ ಸೂಕ್ತ ಪರಿಹಾರ ಕೈಗೊಳ್ಳುವಂತೆ ಸೂಚಿಸಿದರು.

LEAVE A REPLY

Please enter your comment!
Please enter your name here