ಪುತ್ತೂರು: ರೈಲು ನಿಲ್ದಾಣದ ಬಳಿಯಿರುವ ಶ್ರೀ ಮಹಾಲಕ್ಮೀ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ನಡೆಯುವ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯು ಆ.5ರಂದು ನಡೆಯಲಿದೆ. ಶ್ರೀಕೃಷ್ಣ ಉಪಾಧ್ಯಾಯರವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11 ಗಂಟೆಗೆ ಕಲಶಪ್ರತಿಷ್ಠೆ, ಸಂಕಲ್ಪ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯ ತಿಳಿಸಿದ್ದಾರೆ.