ಕೊಂಬಾರು ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆ: ಆ.10ರಂದು ಚುನಾವಣೆ

ಕಡಬ: ಕೊಂಬಾರು ಗ್ರಾ.ಪಂ.ನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕಾರಗೊಂಡಿದೆ.

ಗ್ರಾ.ಪಂ. ಅಧ್ಯಕ್ಷೆಯಾಗಿದ್ದ ಸುಶೀಲ ಶಿವಪ್ರಸಾದ್ ಹಾಗೂ ಉಪಾಧ್ಯಕ್ಷೆ ಸರಿತಾ ಅವರು ರಾಜೀನಾಮೆ ನೀಡಿದ್ದು, ಜು.20ರಂದು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೊಂಬಾರು ಗ್ರಾ.ಪಂ.ನಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಖಾಲಿಯಾಗಿದೆ. ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದೆ. ಕೊಂಬಾರು ಗ್ರಾ.ಪಂ.ನಲ್ಲಿ 9 ಸ್ಥಾನಗಳಿದ್ದು 9 ಜನ ಸದಸ್ಯರೂ ಬಿಜೆಪಿ ಬೆಂಬಲಿತರಾಗಿದ್ದಾರೆ. ಈ ಹಿಂದೆ ಅಧ್ಯಕ್ಷ, ಉಪಾಧ್ಯಕ್ಷರ ಅಽಕಾರ ಅವಧಿಯನ್ನು ಹಂಚಿಕೆ ಮಾಡಿಕೊಡುವ ಕುರಿತು ತೀರ್ಮಾನಿಸಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ,ಉಪಾಧ್ಯಕ್ಷರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಆ.10ರಂದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ: ಆ.10ರಂದು ಮಧ್ಯಾಹ್ನ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿಯಾಗಿದೆ. ಚುನಾವಣಾಧಿಕಾರಿಯಾಗಿ ತಾ.ಪಂ.ಕಾರ್ಯನಿರ್ವಾಹಕಾಧಿಕಾರಿ ನವೀನ್ ಕುಮಾರ್ ಭಂಡಾರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.