ನಿಡ್ಪಳ್ಳಿ; ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಶ್ರೀ ಕ್ಷೇತ್ರ ಬೆಟ್ಟಂಪಾಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯ ಇದರ ಸಹಕಾರದೊಂದಿಗೆ 4 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಹಾಗೂ ಧಾರ್ಮಿಕ ಸಭೆ ಅ.5 ರಂದು ಬೆಟ್ಟಂಪಾಡಿ ದೇವಾಲಯದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 8 ರಿಂದ ಪೂಜೆ ಪ್ರಾರಂಭವಾಗಿ 10.30 ಕ್ಕೆ ಮಹಾಮಂಗಳಾರತಿ ನಡೆಯಲಿದೆ. ಗಂಟೆ 11 ಕ್ಕೆ ಧಾರ್ಮಿಕ ಸಭೆ ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.
ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಪೂಜಾ ಸಮಿತಿ ಅಧ್ಯಕ್ಷೆ ಪ್ರೇಮಲತಾ.ಜೆ.ರೈ ವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶೋಭಿತಾ ಸತೀಶ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ಪುತ್ತೂರು, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅಶ್ವಿನಿ, ಆಯುರ್ವೇದಿಕ್ ತಜ್ಞೆ ಡಾ.ಪ್ರಸನ್ನಾ ಅಖಿಲೇಶ್ ಪಾಣಾಜೆ, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಬೀಡು, ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ, ದೇವಾಲಯದ ಮೊಕ್ತೇಸರ ವಿನೋದ್ ಕುಮಾರ್ ರೈ ಬೀಡು ಇವರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.