ಆ.5:ಫಿಲೋಮಿನಾದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಅಲ್-ಡೊರಾಡೊ’

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ದರ್ಬೆ ಫಿಲೋನಗರದ ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಫ್ಯಾಕುಲಾ 2022 ಪ್ರಸ್ತುತಪಡಿಸುವ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಅಲ್-ಡೊರಾಡೊ’ ಆ.5 ರಂದು ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ಜರಗಲಿದೆ.

ಬೆಳಿಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ|ಆಂಟನಿ ಪ್ರಕಾಶ್ ಮೊಂತೇರೋರವರು ಅಧ್ಯಕ್ಷತೆ ವಹಿಸಲಿರುವರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ನೌಫಲ್ ಆಂಡ್ ಕಂಪೆನಿಯ ಸಿಎ ನೌಫಲ್ ಎಂ.ರವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಗೌರವ ಅತಿಥಿಯಾಗಿ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಸ್ಟ್ಯಾನಿ ಪಿಂಟೋರವರು ಭಾಗವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭ ಜರಗಲಿದೆ. ಸುಮಾರು 15 ಕಾಲೇಜಿನ ತಂಡಗಳು ಫೆಸ್ಟ್‌ನಲ್ಲಿ ಭಾಗವಹಿಸಲಿವೆ. ಕಾರ್ಯಕ್ರಮವು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ(ಐಕ್ಯೂಎಸಿ) ಇದರ ಸಹಯೋಗದಲ್ಲಿ ನಡೆಯಲಿದೆ ಎಂದು ಐಕ್ಯೂಎಸಿ ಸಂಯೋಜಕ ಡಾ|ಎ.ಪಿ ರಾಧಾಕೃಷ್ಣ, ಬಿಬಿಎ ವಿಭಾಗದ ಮುಖ್ಯಸ್ಥ ಡಾ|ರಾಧಾಕೃಷ್ಣ ಗೌಡ ವಿ, ಬಿಬಿಎ ವಿಭಾಗದ ಸ್ಟಾಫ್ ಸಂಯೋಜಕ ಅಭಿಷೇಕ್ ಸುವರ್ಣರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತುಳುವ ಮಾಣಿಕ್ಯ ಬೋಳಾರ್ ವಿಶೇಷ ಆಕರ್ಷಣೆ..

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಶೇಷ ಆಕರ್ಷಣೆಯಾಗಿ ತುಳು ಚಿತ್ರರಂಗದ ಹಾಸ್ಯ ಕಲಾವಿದ ‘ತುಳುವ ಮಾಣಿಕ್ಯ’ ಬಿರುದಾಂಕಿತ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅರವಿಂದ ಬೋಳಾರ್‌ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಲ್ಲದೆ ಶಟರ್‌ಬಾಕ್ಸ್ ಚಿತ್ರದ ನಿರ್ದೇಶಕರಾದ ಸಚಿನ್ ಎಸ್.ಶೆಟ್ಟಿರವರೂ ಕೂಡ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here