ಅ.5ರಿಂದ ಜಿಲ್ಲೆಯಲ್ಲಿ ವಿಧಿಸಿದ್ದ ನಿರ್ಬಂಧದಲ್ಲಿ ಸಡಿಲಿಕೆ: ಡಿ.ಸಿ.

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಅಹಿತಕರ ಘಟನೆ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ರಾತ್ರಿ ನಿರ್ಬಂಧವನ್ನು ಸಡಿಲಿಕೆ ಮಾಡಲಾಗಿದೆ.
ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಆಸ್ಪತ್ರೆ, ಮೆಡಿಕಲ್, ತುರ್ತು ಸೇವೆ ಹೊರತು ಪಡಿಸಿ ಇತರೆಲ್ಲ ಅಂಗಡಿ, ಮುಂಗಟ್ಟು ವ್ಯವಹಾರಗಳನ್ನು ನಿರ್ಬಂಧಿಸಿ ನೀಡಲಾಗಿದ್ದ ಆದೇಶವನ್ನು ಸಡಿಲಗೊಳಿಸಲಾಗಿದ್ದು ಆ.೫ರಿಂದ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವ್ಯವಹಾರ ನಿರ್ಬಂಧ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಈ ನಿರ್ಬಂಧ ವಿಧಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಈ ದಿನಗಳಲ್ಲಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ ೬6ಗಂಟೆ ತನಕ ಅಂಗಡಿ ಮುಂಗಟ್ಟುಗಳು ಮುಚ್ಚಲಿವೆ.
ಮದ್ಯ ವ್ಯಾಪಾರ: ಆ.5ರಿಂದ ಮದ್ಯದಂಗಡಿಗಳನ್ನು ಸಂಜೆ 6 ಗಂಟೆಯವರೆಗೆ ತೆರೆದು ವ್ಯವಹಾರ ನಡೆಸಲು ಅವಕಾಶ ನೀಡಲಾಗಿದೆ. ಉಳಿದಂತೆ ಸೆಕ್ಷನ್ 144ರಡಿಯಲ್ಲಿನ ನಿಷೇಧಾಜ್ಞೆ ಈ ಹಿಂದಿನಂತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.