ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಯುವವಾಹಿನಿ ಸುಳ್ಯ ಘಟಕದ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರುರವರ ಮನೆಗೆ ಯುವವಾಹಿನಿ ಕೇಂದ್ರ ಸಮಿತಿಯ ತಂಡ ಅಧ್ಯಕ್ಷ ಉದಯ ಅಮೀನ್ ಮಟ್ಟುರವರ ನೇತೃತ್ವದಲ್ಲಿ ಆ.4ರಂದು ಭೇಟಿ ನೀಡಿದರು. ಪ್ರವೀಣ್ ಪತ್ನಿ ನೂತನ ಹಾಗೂ ಪ್ರವೀಣ್ರವರ ತಂದೆ ತಾಯಿಗೆ ಸಾಂತ್ವನ ಹೇಳಿ ಯುವವಾಹಿನಿ ಸಂಸ್ಥೆಯ ವತಿಯಿಂದ ರೂ 1 ಲಕ್ಷ ಮೊತ್ತವನ್ನು ಹಸ್ತಾಂತರಿಸಿದರು.
ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಒಟ್ಟು ೩೭ ಮಂದಿ ಉಪಸ್ಥಿತರಿದ್ದರು.