ನರೇಂದ್ರ ಪ.ಪೂ.ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್‌ಗಳ ಮಾಹಿತಿ

0

ಪುತ್ತೂರು : ಯಾವುದೇ ಪರೀಕ್ಷೆಯನ್ನು ಎದುರಿಸಲು ಆಸಕ್ತಿ ಜೊತೆಗೆ ನಿರಂತರ ಅಭ್ಯಾಸ ಇರಬೇಕು. ಸಿಎ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಸಂಗ್ರಹಿಸಿ ಓದಬೇಕು. ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಅರಿತುಕೊಂಡ ವಿಷಯದ ಬಗ್ಗೆ ಪುನರ್ ಮನನ ಮಾಡಿಕೊಳ್ಳುವ ಅಭ್ಯಾಸ ಹೆಚ್ಚಿಸಿಕೊಂಡರೆ ಪೂರ್ವಭಾವಿ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಬಹುದು. ಸವಾಲುಗಳು ಎದುರಾದಷ್ಟು ಮನುಷ್ಯ ಮತ್ತಷ್ಟು ಬಲಗೊಳ್ಳುತ್ತಾನೆ. ಬದುಕಿನ ಯಾವುದೇ ಪರೀಕ್ಷೆಗಳನ್ನು ಎದುರಿಸಬಹುದು ಎಂದು ಲೆಖ್‌ಪಾಲ್ ಫೌಂಡೇಶನ್ ಸಂಸ್ಥೆಯ ಸ್ಥಾಪಕ ರಾಜ್‌ಗಣೇಶ್ ಕಾಮತ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ನಡೆದ ವೃತ್ತಿಪರ ಕೋರ್ಸ್‌ಗಳ ಬಗ್ಗೆ ಮಾಹಿತಿ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿಎ, ಸಿಎಸ್, ಎಂಬಿಎ, ಸಿಎಂಎ ಕೋರ್ಸ್‌ಗಳ ಬಗ್ಗೆ ವಿವರಿಸಿದರು. ಅದಕ್ಕೆ ಪೂರಕವಾದ ಪ್ರವೇಶ ಪರೀಕ್ಷೆಗಳನ್ನು ಎದುರಿಸಲು ಮಾಡಬೇಕಾದ ಪೂರ್ವ ಸಿದ್ದತೆಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಸಂದೇಹಗಳಿಗೆ ಉತ್ತರಿಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ಉಪನ್ಯಾಸಕಿ ಸೌಮ್ಯ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here