ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ

0

 

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತನ್ನ ವ್ಯವಹಾರ ಕ್ಷೇತ್ರದ ಸಾಧನೆಗಾಗಿ ಸತತ 11 ನೇ ಬಾರಿ ಎಸ್ ಸಿ ಡಿಸಿಸಿ ಬ್ಯಾಂಕ್ ನ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆ 5 ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸೌಧದಲ್ಲಿ ನಡೆದ ಎಸ್ ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ರವರು ಸವಣೂರು ಸಿ.ಎ.ಬ್ಯಾಂಕಿನ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪಿರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸವಣೂರು ಸಿ.ಎ, ಬ್ಯಾಂಕಿನ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಎಸ್ ಸಿ ಡಿಸಿಸಿ ಬ್ಯಾಂಕಿನ ನಿರ್ದೇಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ರವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here