ಪುತ್ತೂರು: ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ರೈತ ಚಿಂತನಾ ಸಭೆ ಆ.7ರಂದು ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಸಭೆಯಲ್ಲಿ ಗ್ರಾಮದ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ರೈತ ಸಂಘದ ಗ್ರಾಮ ಘಟಕ ರಚಿಸಿ ರೈತರ ಸಮಗ್ರ ಅಭಿವೃದ್ಧಿಗಾಗಿ ‘ರೈತ ಚಿಂತನ ಮಂಥನ’ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.