ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಪ್ರದಾನ

ಪುತ್ತೂರು : ತನ್ನ ವಿಶೇಷ ಸಾಧನೆಗಾಗಿ ಬನ್ನೂರು ರೈತರ ಸೇವಾ ಸಹಕಾರಿ ಸಂಘ ಸತತ ಐದನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿ ಪಡೆದುಕೊಂಡಿದೆ. ಆ.5ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ರವರು ಪ್ರಶಸ್ತಿ ಪ್ರದಾನ ಮಾಡಿದರು. ಬನ್ನೂರು ರೈತರ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್‌ರವರು ಪ್ರಶಸ್ತಿ ಸ್ವೀಕರಿಸಿದರು.

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ್ ಜೈನ್, ವ್ಯವಸ್ಥಾಪಕಿ ರಾಧಾ ಬಿ. ರೈ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳಾದ ಎಸ್.ಬಿ ಜಯರಾಮ ರೈ, ಶಶಿಕುಮಾರ್ ರೈ ಬಾಲ್ಯೊಟ್ಟು, ರಾಜರಾಮ ಭಟ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.