ನಿಡ್ಪಳ್ಳಿ; ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ, ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ನಿಡ್ಪಳ್ಳಿ ಇವುಗಳ ಜಂಟಿ ಆಶ್ರಯದಲ್ಲಿ ವೇlಮೂl ಶ್ರೀ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ 4 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಅ.5 ರಂದು ನಿಡ್ಪಳ್ಳಿ ದೇವಾಲಯದಲ್ಲಿ ನಡೆಯಿತು.
ಬೆಳಿಗ್ಗೆ ಪೂಜೆ ಪ್ರಾರಂಭವಾಗಿ ಮಧ್ಯಾಹ್ನ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೆ ಮತ್ತು ಪದಾಧಿಕಾರಿಗಳು, ಪೂಜಾ ಸಮಿತಿಯ ಅಧ್ಯಕ್ಷೆ ಶಕೀಲಾ ಜೆ.ರೈ ಮತ್ತು ಸರ್ವ ಸದಸ್ಯರು ಹಾಗೂ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.