ನೆಲ್ಯಾಡಿ ಗ್ರಾ.ಪಂ.ನಲ್ಲಿ ಚದುರಂಗ ಸ್ಪರ್ಧೆ

0

ನೆಲ್ಯಾಡಿ: ‘ಓದುವ ಬೆಳಕು’ ಕಾರ್ಯಕ್ರಮದಡಿ ಗ್ರಾಮ ಚದುರಂಗ ಆಟ ಆಡೋಣ ಅಭಿಯಾನದ ಅಂಗವಾಗಿ ನೆಲ್ಯಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚದುರಂಗ ಸ್ಪರ್ಧೆ ಆ.5ರಂದು ನೆಲ್ಯಾಡಿ ಗ್ರಾ.ಪಂ. ಗ್ರಂಥಾಲಯದಲ್ಲಿ ನಡೆಯಿತು.


ಗ್ರಾ.ಪಂ.ಅಧ್ಯಕ್ಷೆ ಚೇತನಾ ಉದ್ಘಾಟಿಸಿದರು. ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಸದಸ್ಯರಾದ ಆನಂದ ಗೌಡ ಪಿಲವೂರು, ಜಯಂತಿ, ಉಷಾ ಜೋಯಿ, ರವಿಪ್ರಸಾದ್ ಶೆಟ್ಟಿ, ಪುಷ್ಪಾ, ನೆಲ್ಯಾಡಿ ಪುಚ್ಚೇರಿ ಶಾಲಾ ಶಿಕ್ಷಕ ಪುರಂದರ ಗೌಡ ಡಿ., ಪಡುಬೆಟ್ಟು ಸರಕಾರಿ ಪ್ರೌಢಶಾಲೆ ಶಿಕ್ಷಕ ಕುಶಾಲಪ್ಪ ಜಿ., ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯ ಶಿಕ್ಷಕ ಸುಧಾಕರ, ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಶಿಕ್ಷಕಿ ಕೋಮಲಾಂಗಿ, ಪಡುಬೆಟ್ಟು ಸರಕಾರಿ ಹಿ.ಪ್ರಾ.ಶಾಲೆಯ ಶಿಕ್ಷಕಿ ಲೀಲಾವತಿ ಎಂ., ನೆಲ್ಯಾಡಿ ಸಂತಜಾರ್ಜ್ ಪ್ರೌಢಶಾಲೆಯ ಹಾರಿಸ್‌ರವರು ಉಪಸ್ಥಿತರಿದ್ದರು.

ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ.,ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಯಾಡಿ ಗ್ರಾ.ಪಂ.ಸಿಬ್ಬಂದಿ ಶಿವಪ್ರಸಾದ್ ಸ್ವಾಗತಿಸಿದರು. ಸಿಬ್ಬಂದಿಗಳಾದ ಗಿರೀಶ್ ಡಿ., ಸೋಮಶೇಖರ, ಅಬ್ದುಲ್ ರಹಿಮಾನ್, ಭವ್ಯ, ಲಲಿತಾ ಹಾಗೂ ಲೀಲಾವತಿ ಸಹಕರಿಸಿದರು.

ಮಧುಶ್ರೀ ತಾಲೂಕುಮಟ್ಟಕ್ಕೆ ಆಯ್ಕೆ:
ಪ್ರಾಥಮಿಕ ಶಾಲಾ ವಿಭಾಗದಲ್ಲಿ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆಯ ಅಪ್‌ನಾನ್ ಪ್ರಥಮ ಹಾಗೂ ಪಡುಬೆಟ್ಟು ಸರಕಾರಿ ಹಿ.ಪ್ರಾ.ಶಾಲೆಯ ಹರಿಕಿರಣ ದ್ವಿತೀಯ ಸ್ಥಾನ ಪಡೆದುಕೊಂಡರು. ಪ್ರೌಢಶಾಲಾ ವಿಭಾಗದಲ್ಲಿ ನೆಲ್ಯಾಡಿ ಸಂತಜಾರ್ಜ್ ಪ್ರೌಢಶಾಲೆಯ ಮಧುಶ್ರೀ ಪ್ರಥಮ ಹಾಗೂ ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ವಿಶಾಲ್ ದ್ವಿತೀಯ ಸ್ಥಾನ ಪಡೆದುಕೊಂಡರು. ಈ ಪೈಕಿ ನೆಲ್ಯಾಡಿ ಸಂತಜಾರ್ಜ್ ಪ್ರೌಢಶಾಲೆಯ ಮಧುಶ್ರೀ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here