ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

0

ಕಾಣಿಯೂರು: ಶ್ರೀ ವರಮಹಾಲಕ್ಷ್ಮಿ ವೃತ ಪೂಜಾ ಸಮಿತಿ ಪುಣ್ಚತ್ತಾರು ಇದರ ವತಿಯಿಂದ ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಜರಗಿತು. ನಾವೂರು ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಹಾಗೂ ಪುಣ್ಚತ್ತಾರು ಶ್ರೀ ಹರಿ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನುವಂಶಿಕ ಮೊಕ್ತೇಸರರು, ಮೊಕ್ತೇಸರರು, ಆಡಳಿತ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಪುಣ್ಚತ್ತಾರು ಇದರ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here