ಅಗಳಿಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಕಾಣಿಯೂರು: ಕಾಯಿಮಣ ಗ್ರಾಮದ ಅಗಳಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ವತಿಯಿಂದ 5ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ 5ರಂದು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ಅರ್ಚಕ ರಾಮಕೃಷ್ಣ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.ಬೆಳಿಗ್ಗೆ ಪೂಜೆ ಪ್ರಾರಂಭಗೊಂಡು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ನಡೆಯಿತು. ಅಗಳಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಉದಯ ರೈ ಮಾದೋಡಿ, ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ತಾರಾ ಶಿವಣ್ಣ ಗೌಡ ಬೆಳಂದೂರು, ಗೌರವಾಧ್ಯಕ್ಷೆ ನಳಿನಿ ಶಿವರಾಮ ಗೌಡ ಅಗಳಿ, ಕಾರ್ಯದರ್ಶಿ ಸಂಧ್ಯಾ ಸಂತೋಷ್ ಅಗಳಿ ಹಾಗೂ ಪದಾಧಿಕಾರಿಗಳು, ಹಲವಾರು ಮಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here