ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ಆಲಂಕಾರು ವಲಯ, ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ ರಾಮಕುಂಜ ಇದರ ಆಶ್ರಯದಲ್ಲಿ ’ಆಟಿಡೊಂಜಿ ದಿನದ ಮಹತ್ವ ಹಾಗೂ ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಆ.8ರಂದು ಬೆಳಿಗ್ಗೆ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ 9ರಿಂದ ರಾಮಕುಂಜ ಗ್ರಾಮದ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ. ಪೂರ್ವಾಹ್ನ 11ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಜಯಂತಿ ನಾಗೇಶ್ ತಾವೂರು-ರಾಮಕುಂಜ ಉದ್ಘಾಟಿಸಲಿದ್ದಾರೆ. ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆದ್ದೊಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಪೂರ್ಣಾತ್ಮರಾಮ ಈಶ್ವರಮಂಗಲರವರು ’ಆಹಾರ ಆಚಾರ’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷ ವಿಶ್ವನಾಥ ಗೌಡ ಕೆ., ಒಕ್ಕಲಿಗ ಸ್ವಸಹಾಯ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಎ.ವಿ.ನಾರಾಯಣ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ತೇಜಸ್ವಿನಿಶೇಖರ ಗೌಡ, ಒಕ್ಕಲಿಗ ಗೌಡ ಸೇವಾ ಸಂಘದ ಆಲಂಕಾರು ವಲಯ ಉಸ್ತುವಾರಿ ಚಕ್ರಪಾಣಿ ಬಾಕಿಲ, ಆಲಂಕಾರು ವಲಯ ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ರಾಮಣ್ಣ ಗೌಡರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 2021-22ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಜೀವನ್ ಸಂಪ್ಯಾಡಿ ಹಾಗೂ ಶರಣ್ಯ ಜಿ.ಗಾಂಧಾರಿಮಜಲುರವರಿಗೆ ಪ್ರತಿಭಾ ಪುರಸ್ಕಾರ, ಅತ್ಯುತ್ತಮ ಸ್ವಸಹಾಯ ಸಂಘಗಳಿಗೆ ಗೌರವಾರ್ಪಣೆ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.