ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆ : ತಾ.ಪಂನಲ್ಲಿ ಚದುರಂಗ ಆಟ ಆಡೋಣ ಅಭಿಯಾನ

0

ನೇರ ಮುಖಾಮುಖಿ ಎದುರಿಸುವ ಸ್ಪರ್ಧೆ ಭಾರತೀಯ ಕ್ರೀಡೆಯಲ್ಲಿ ಮಾತ್ರ – ಸಂಜೀವ ಮಠಂದೂರು

ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಪುತ್ತೂರು ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಗ್ರಾಮ ಪಂಚಾಯತ್ ಗ್ರಂಥಾಲಯದ ‘ಓದುವ ಬೆಳಕು’ ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿಜೇತರಾದ ಕ್ರೀಡಾಳುಗಳಿಗೆ ತಾಲೂಕು ಮಟ್ಟದ ‘ಚದುರಂಗ ಆಟ ಆಡೋಣ’ ಅಭಿಯಾನ ಆ.6ರಂದು ತಾ.ಪಂ ಸಭಾಂಗಣದಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ, ಚದುರಂಗ ಆಟಕ್ಕೆ ಚಾಲನೆ ನೀಡಿದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್. ಅಕ್ಷರದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ಯುವಜನ ಕ್ರೀಡಾ ಇಲಾಖೆಯ ಮೇಲ್ವಿಚಾರಕ ಶ್ರೀಕಾಂತ್, ನರೇಗದ ಮೇಲ್ವಿಚಾರಕಿ ಶೈಲಜಾ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭರತ್ ಕಾರ್ಯಕ್ರಮ ನಿರೂಪಿಸಿದರು.

22 ಗ್ರಾ.ಪಂ ನ ವಿಜೇತರು ತಾಲೂಕು‌ಮಟ್ಟದ ಸ್ಪರ್ಧೆಯಲ್ಲಿ ಭಾಗಿ:

ಈಗಾಗಲೆ 22 ಗ್ರಾ.ಪಂ ನಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಲಯಮ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿಯೊಬ್ಬರು ಪಂಚಾಯತ್ ಮಟ್ಟದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದರು. ತಾಲೂಕು ಮಡ್ಟದ ಸ್ಪರ್ಧೆಯಲ್ಲಿ ವಿಜೇತರಾದವರು ಮುಂದೆ ಆ.12 ಕ್ಕೆ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು. ಅಲ್ಲಿ ವಿಜೇತರಾದವರನ್ನು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಗೌರವಿಸಲಾಗುತ್ತದೆ. ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಕೊಡಿಪ್ಪಾಡಿ ಶಾಲೆಯ ಸ್ಟ್ಯಾನಿ ಪ್ರವೀಣ್, ಪರ್ಲಡ್ಕ ಶಾಲೆಯ ಪವಿತ್ರಾ, ವಿವೇಕಾನಂದ ಶಾಲೆಯ ದಾಮೋದರ, ಪಾಪೆಮಜಲು ಶಾಲೆಯ ಪ್ರವೀಣಾ ರೈ ತೀರ್ಪುಗಾರರಾಗಿ ಸಹಕರಿಸಿದರು.

LEAVE A REPLY

Please enter your comment!
Please enter your name here