ಬೆಟ್ಟಂಪಾಡಿ ದೇವಾಲಯದಲ್ಲಿ 4 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ, ಧಾರ್ಮಿಕ ಸಭೆ

ನಿಡ್ಪಳ್ಳಿ; ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಶ್ರೀ ಕ್ಷೇತ್ರ ಬೆಟ್ಟಂಪಾಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯ ಇದರ ಸಹಕಾರದೊಂದಿಗೆ 4 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಹಾಗೂ ಧಾರ್ಮಿಕ ಸಭೆ ವೇದಮೂರ್ತಿ ರಾಧಾಕೃಷ್ಣ ಭಟ್ ಕಕ್ಕೂರು ರವರ ನೇತೃತ್ವದಲ್ಲಿ ಅ.5 ರಂದು ಬೆಟ್ಟಂಪಾಡಿ ದೇವಾಲಯದಲ್ಲಿ ನಡೆಯಿತು.
ಬೆಳಿಗ್ಗೆ ಪೂಜೆ ಪ್ರಾರಂಭವಾಗಿ ಮಹಾಮಂಗಳಾರತಿ ನಡೆಯಿತು. ನಂತರ ನಡೆದ  ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಪೂಜಾ ಸಮಿತಿ ಅಧ್ಯಕ್ಷೆ ಪ್ರೇಮಲತಾ.ಜೆ.ರೈ ವಹಿಸಿದ್ದರು. ಪುತ್ತೂರು ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶೋಭಿತಾ ಸತೀಶ್ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ಪುತ್ತೂರು, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅಶ್ವಿನಿ,  ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಬೀಡು, ದೇವಾಲಯದ ಮೊಕ್ತೇಸರ ವಿನೋದ್ ಕುಮಾರ್ ರೈ ಬೀಡು, ಪೂಜಾ ಸಮಿತಿ ಗೌರವಾಧ್ಯಕ್ಷ  ವೇದ ಮೂರ್ತಿ ರಾಧಾಕೃಷ್ಣ ಭಟ್ ಕಕ್ಕೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸುಮನ ಎಸ್ ಬಲ್ಲಾಳ್, ಸುಲೋಚನ ಜೆ ರೈ, ಅನನ್ಯಾ.ಕೆ ರೈ ಪ್ರಾರ್ಥಿಸಿದರು. ಲಕ್ಷ್ಮೀನಾರಾಯಣ ರೈ ನುಳಿಯಾಲು ಸ್ವಾಗತಿಸಿ, ಸವಿತಾ ಚಂದ್ರನ್ ತಲೆಪ್ಪಾಡಿ ವಂದಿಸಿದರು. ಪೂಜಾ ಸಮಿತಿ ಕಾರ್ಯದರ್ಶಿ ಸುಪ್ರೀತಾ .ಪಿ ರೈ ಬಾಜುವಳ್ಳಿ ವರದಿ ವಾಚಿಸಿದರು. ಪ್ರಿಯದರ್ಶಿನಿ ಶಾಲಾ ಮುಖ್ಯ ಗುರು ರಾಜೇಶ್ ನೆಲ್ಲಿತ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಪೂಜಾ ಸಮಿತಿ ಸದಸ್ಯರು, ಒಕ್ಕೂಟದ ಸದಸ್ಯರು, ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.