ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಹಾಸಭೆ: ಉಪ್ಪಿನಂಗಡಿ ಸಹಕಾರ ಸಂಘಕ್ಕೆ ಸೇವಾ ಸಾಧನೆ ಪ್ರಶಸ್ತಿ

0

ಉಪ್ಪಿನಂಗಡಿ: ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ತನ್ನ ಕಾರ‍್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಸೇವಾ ಸಾಧನೆ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್, ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್ ಪ್ರಶಸ್ತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬೇಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ಬಾಲ್ಯೋಟ್ಟು, ಎಸ್.ಬಿ. ಜಯರಾಮ ರೈ, ಟಿ.ಜಿ. ರಾಜಾರಾಮ್ ಭಟ್, ನಿರಂಜನ, ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು, ನಿರ್ದೇಶಕರಾದ ಜಗದೀಶ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here