ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಶರವೂರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆಲಂಕಾರು ಮತ್ತು ಶರವೂರು ಒಕ್ಕೂಟದ ಅಶ್ರಯದಲ್ಲಿ 17 ನೇ ವರ್ಷದ ಸಾಮೂಹಿಕ ವರಮಹಾಲಕ್ಷೀ ಪೂಜೆ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಪ್ರಸಾದ್ .ಟಿ ಮತ್ತು ತಂಡದವರು ಪೂಜಾ ವಿಧಿ ವಿಧಾನ ನೇರವೆರಿಸಿದರು.

ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ದಾಮೋದರ ಗೌಡ ಮತ್ತು ವ್ಯವಸ್ಥಾಪನ ಸಮಿತಿ ಸದಸ್ಯರು, ಸಾಮೂಹಿಕ ವರಮಹಾಲಕ್ಷೀ ಪೂಜಾ ಸಮಿತಿ ಶರವೂರು ಇದರ ಅಧ್ಯಕ್ಷರಾದ ಶಾರದ ಮತ್ತು ಪದಾಧಿಕಾರಿಗಳು ಹಾಗು ಸದಸ್ಯರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶರವೂರು ಹಾಗು ಆಲಂಕಾರು ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷೀ ಹಾಗು ಹರೀಶ್ ಏಂತಡ್ಕ, ಹಾಗು ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಸಹಕರಿಸಿದರು. ಅಗಮಿಸಿದ ಭಕ್ತಾಧಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.