ನೆಲ್ಯಾಡಿ: ತನ್ನ ವಿಶೇಷ ಸಾಧನೆಗಾಗಿ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತ ೪ನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಪ್ರಶಸ್ತಿ ಪಡೆದುಕೊಂಡಿದೆ.
ಆ.5ರಂದು ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ರವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಪಟ್ಟೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಕೆ.ಯಂ.,ರವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕಮಲಾಕ್ಷ ಗೌಡ, ನಿರ್ದೇಶಕರುಗಳಾದ ಬಾಲಕೃಷ್ಣ ಬಾಣಜಾಲು, ಉಷಾ ಅಂಚನ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಯರಾಮ ರೈ ಬಳಜ್ಜ, ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ನಾಯಕ್, ಬ್ಯಾಂಕಿನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಜಿಲ್ಲಾ ಸಹಕಾರಿ ಯೂನಿಯನ್ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಉಪಸ್ಥಿತರಿದ್ದರು.