ತಾಲೂಕು ಆರೋಗ್ಯ ಇಲಾಖೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ – ಇನ್ನರ್‌ವೀಲ್ ಕ್ಲಬ್‌ನಿಂದ 5ಸಾವಿರ ಕರಪತ್ರ ಹಸ್ತಾಂತರ

ಪುತ್ತೂರು: ತಾಲೂಕು ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿ ಕಚೇರಿ ಮತ್ತು ಇನ್ನರ್‌ವೀಲ್ ಕ್ಲಬ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ವಿಶ್ವ ಸ್ತನ್ಯಪಾಲನ ಸಪ್ತಾಹ ಕಾರ್ಯಕ್ರಮ ಆ.5ರಂದು ತಾಲೂಕು ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಸಪ್ತಾಹ ಅಧ್ಯಕ್ಷತೆ ವಹಿಸಿದ್ದರು. ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಟೈನಿ ದೀಪಕ್ ಅವರು ಸಪ್ತಾಹವನ್ನು ಉದ್ಘಾಟಿಸಿ ಕ್ಲಬ್‌ನ ವತಿಯಿಂದ ಸ್ತನ್ಯಪಾನದ ಮಹತ್ವವವನ್ನು ಸಾರುವ ೫ಸಾವಿರ ಕರಪತ್ರಗಳನ್ನು ಆರೋಗ್ಯಾಧಿಕಾರಿಯವರಿಗೆ ಹಸ್ತಾಂತರಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪದ್ಮಾವತಿ ಎಂ.ಆರ್ ವಿಶ್ವ ಸ್ತನ್ಯಪಾನ ಕುರಿತು ಮಾಹಿತಿ ನೀಡಿದರು. ಇನ್ನರ್‌ವೀಲ್ ಕ್ಲಬ್‌ನ ಸದಸ್ಯರು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಗಳು ಸಪ್ತಾಹದಲ್ಲಿ ಭಾಗವಹಿಸಿದ್ದರು. ಆಶಾ ಮೆಂಟ್ ಹರಿಣಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಲಕ್ಷ್ಮೀ ಎಂ. ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.