ಒಳಮೊಗ್ರು ಗ್ರಾಪಂನಲ್ಲಿ ಚದುರಂಗ ಸ್ಪರ್ಧೆ

0

ಪುತ್ತೂರು: ಓದುವ ಬೆಳಕು ಕಾರ್ಯಕ್ರಮದಡಿ ಗ್ರಾಮ ಚದುರಂಗ ಆಟ ಆಡೋಣ ಅಭಿಯಾನದ ಅಂಗವಾಗಿ ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆಗಳಿಗೆ ಚದುರಂಗ ಸ್ಪರ್ಧೆ ಒಳಮೊಗ್ರು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಉದ್ಘಾಟಿಸಿದರು. ಗ್ರಾಮದ ಪರ್ಪುಂಜ, ಕುಂಬ್ರ, ದರ್ಬೆತ್ತಡ್ಕ, ಕುಟ್ಟಿನೋಪಿನಡ್ಕ, ಏಕತ್ತಡ್ಕ ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದವರು, ಗ್ರಾಪಂ ಸದಸ್ಯರುಗಳು ಉಪಸ್ಥಿತರಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್ ಸ್ವಾಗತಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here