ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಗೆ ಎಸ್ ಸಿ ಡಿಸಿಸಿ ಬ್ಯಾಂಕಿನಿಂದ  ಸಾಧನಾ ಪ್ರಶಸ್ತಿ

0

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರತಿಷ್ಟಿತ ಸಹಕಾರಿ ಸಂಸ್ಥೆಗಳಲ್ಲೊಂದಾದ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಗೆ ಪ್ರಪ್ರಥಮ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ  ಸಾಧನಾ ಪ್ರಶಸ್ತಿ ಲಭಿಸಿದೆ.
2021-22 ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ತನ್ನ ಕಾರ್ಯದಕ್ಷತೆಯನ್ನು ಮೆರೆದು ದಾಖಲೆಯ ರೂ. 557 ಕೋಟಿಗಳ ವ್ಯವಹಾರವನ್ನು ಮಾಡಿ. ರೂ. 115.06 ಕೋಟಿ ರೂಪಾಯಿಗಳ ಠೇವಣಿ ಹೊಂದಿದ್ದು, ಸದಸ್ಯರ ಹೊರಬಾಕಿ ಸಾಲ ರೂ. 64.67 ಕೋಟಿ, ಸಾಲ ವಸೂಲಾತಿ ಪ್ರಮಾಣ ಶೇಕಡಾ 91.08 ರಷ್ಟಿದ್ದು, ವರದಿ ವರ್ಷದಲ್ಲಿ ರೂ. 2.26 ಕೋಟಿ ಲಾಭಗಳಿಸಿದ್ದು, ಪ್ರಸ್ತುತ ಬ್ಯಾಂಕಿನ ದುಡಿಯುವ ಬಂಡವಾಳ 136 ಕೋಟಿ ರೂಪಾಯಿ ಆಗಿದೆ‌.
ಬ್ಯಾಂಕ್ ಹಲವಾರು ವರ್ಷಗಳಿಂದ ಅಡಿಟ್ ವರ್ಗಿಕರಣದಲ್ಲಿ ‘ಎ’ ತರಗತಿಯನ್ನು ಹೊಂದಿದ್ದು, ಈ ಎಲ್ಲಾ ಸಾಧನೆಗಳನ್ನು ಗುರುತಿಸಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರು ಮಂಗಳೂರಿನಲ್ಲಿ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಹೆಚ್.ಜಗನ್ನಾಥ್ ಸಾಲಿಯಾನ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್.ಕೆ ರವರಿಗೆ ಶಾಲು ಹೊದಿಸಿ ಸನ್ಮಾನಿಸಿ ಪ್ರಶಸ್ತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ವಿಶ್ವನಾಥ ಎಂ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here