ಬೊಳುವಾರು ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ಬಾಲಕ ಸುಶಾನ್ ರೈ ಮೃತಪಟ್ಟ ಪ್ರಕರಣ: ಪೋಷಕರ ದೂರಿನಂತೆ ಪ್ರಕರಣ ದಾಖಲು

0


ಪುತ್ತೂರು: ಬೊಳುವಾರು ವಸತಿ ಸಮುಚ್ಚಯವೊಂದರ ಮಹಡಿಯಿಂದ ಬಿದ್ದು ಮೃತಪಟ್ಟ ಸುದಾನ ವಸತಿಯುತ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್ ರೈ ಅವರ ಅಂತ್ಯಕ್ರಿಯೆ ಪುತ್ತೂರು ಮಡಿವಾಳಕಟ್ಟೆ ಸ್ಮಶಾನದಲ್ಲಿ ಆ.6ರಂದು ಸಂಜೆ ನಡೆಯಿತು. ಈ ಮಧ್ಯೆ ಮೃತ ಬಾಲಕನ ತಂದೆ ಮನೋಹರ್ ರೈಯವರು ಘಟನೆಯ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಆ.5ರಂದು ಸಂಜೆ ಬೊಳುವಾರು ವಸತಿ ಸಮುಚ್ಚಯವೊಂದರ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಮೃತ ಸುಶಾನ್ ರೈಯವರ ತಂದೆ ಮನೋಹರ್ ರೈಯವರು ನೀಡಿದ ದೂರಿನಂತೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾನು ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಉಳ್ಳಾಲ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿರುವ ಸಂದರ್ಭ ನನ್ನ ಮಗ ಮಹಡಿಯಿಂದ ಬಿದ್ದಿರುವ ಕುರಿತು ನನ್ನ ಪತ್ನಿ ನನಗೆ ಮಾಹಿತಿ ನೀಡಿದ್ದರು. ನಾನು ಘಟನಾ ಸ್ಥಳಕ್ಕೆ ಹೋಗುವ ಸಂದರ್ಭದಲ್ಲಿ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ನಾನು ಆಸ್ಪತ್ರೆಗೆ ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದೆ. ಅಲ್ಲಿ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ನನ್ನ ಮಗ ಮೃತಪಟ್ಟ ಘಟನೆ ಕುರಿತು ತನಿಖೆ ನಡೆಸಬೇಕೆಂದು ಅವರು ದೂರಿನಲ್ಲಿ ತಿಳಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮನೆಗೆ ಬರುವ ದಾರಿ ಬದಲಾಯಿಸಿದ ಸುಶಾನ್ ರೈ: ಸುಶಾನ್ ರೈ ಅವರನ್ನು ಬೆಳಿಗ್ಗೆ ಅವರ ತಂದೆ ಮನೋಹರ್ ರೈ ಅವರು ಶಾಲೆಗೆ ಬಿಟ್ಟು ಬರುತ್ತಿದ್ದು, ಸಂಜೆ ಆತ ಆಟೋ ರಿಕ್ಷಾದಲ್ಲಿ ಬೊಳುವಾರಿಗೆ ಬಂದು ಅಲ್ಲಿಂದ ಹರಿಪ್ರಸಾದ್ ಹೊಟೇಲ್ ಪಕ್ಕದ ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಆ.5ರಂದು ಎಂದಿನAತೆ ಸಂಜೆ ಆಟೋ ರಿಕ್ಷಾದಲ್ಲಿ ಬಂದ ಸುಶಾನ್ ರೈ ಬೊಳುವಾರಿನಲ್ಲಿ ಇಳಿದು ಬಳಿಕ ನಿತ್ಯ ಹೋಗುವ ರಸ್ತೆಯನ್ನು ಬದಲಾಯಿಸಿ ಬೊಳುವಾರು ವಸತಿ ಸಮುಚ್ಚಯದ ಬಳಿಯ ರಸ್ತೆಯಿಂದ ಮನೆ ಕಡೆಗೆ ಹೊರಟ್ಟಿದ್ದರು. ಆದರೆ ಮನೆ ಕಡೆ ಹೋಗದೆ ವಸತಿ ಸಮುಚ್ಚಯಕ್ಕೆ ಹೋಗಿದ್ದಾರೆ. ಕೆಲವೇ ಕ್ಷಣದಲ್ಲಿ ಅವರು ಮಹಡಿಯಿಂದ ಬಿದ್ದ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಮಡಿವಾಳಕಟ್ಟೆ ಸ್ಮಶಾನದಲ್ಲಿ ಅಂತ್ಯಕ್ರಿಯೆ:ಮೃತ ಸುಶಾನ್ ರೈ ಅವರ ಮೃತದೇಹವನ್ನು ಆ.6ರಂದು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮಧ್ಯಾಹ್ನ ಪುತ್ತೂರು ಬೊಳುವಾರು ಬೈಲು ಮನೆಗೆ ತಂದು ಬಳಿಕ ಪುತ್ತೂರು ಮಡಿವಾಳ ಕಟ್ಟೆ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಮೃತ ಬಾಲಕನ ತಂದೆ ಪದ್ಮುಂಜ ಕೆನರಾ ಬ್ಯಾಂಕ್‌ನ ನಿವೃತ ಮ್ಯಾನೇಜರ್, ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಉಳ್ಳಾಲ್ತಿ ಮಲರಾಯ ಸಪರಿವಾರ ಕ್ಷೇತ್ರದ ವಿಶ್ವಸ್ಥ ಮಂಡಳಿ ಅಧ್ಯಕ್ಷ ಮನೋಹರ ರೈ, ತಾಯಿ ಸುಧಾ ಎಮ್ ರೈ ಮತ್ತು ಸಹೋದರ ಸೋಹನ್ ರೈ ಮತ್ತು ಸಂಬAಧಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here