ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ವಿವಿಧ ಸ್ಪರ್ಧೆಗಳಿಗೆ ಚಾಲನೆ

0



ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ವಿವಿಧ ಸ್ಪರ್ಧೆಗಳಿಗೆ ಆ.7 ರಂದು ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಯಿತು.

ಆರಂಭದ ಸ್ಪರ್ಧೆಯಾಗಿ ಚದುರಂಗದ ಆಟವನ್ನು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸುನಿತಾ ಅವರು ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಚದುರಂಗದ ದಾಳವನ್ನು ಮುಂದಿಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಅಧ್ಯಕ್ಷ ಶಶಾಂಕ ಕೊಟೇಚಾ ಅಧ್ಯಕ್ಷತೆ ವಹಿಸಿದ್ದರು. 

ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೋಶಾಧಿಕಾರಿ ಶ್ರೀನಿವಾಸ್, ಜೊತೆಕಾರ್ಯದರ್ಶಿ ನೀಲಂತ್, ಅಶೋಕ್ ಕುಂಬ್ಳೆ, ಚದುರಂಗ ಸ್ಪರ್ಧೆಯ ತೀರ್ಪುಗಾರರಾಗಿರುವ ಉಡುಪಿಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ ಉಮಾನಾಥ್, ಅವರ ಪುತ್ರ ಸಾಕ್ಷತ್ ಮತ್ತು ಸ್ಪರ್ಧಾ ನಿರ್ವಾಹಕರಾಗಿರುವ ಶ್ರೀಕಾಂತ್, ಜಯಶ್ತೀ ಎಸ್ ಶೆಟ್ಟಿ ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here