`ಸ್ವಚ್ಛ ವಾಹಿನಿ ಸಾರಥಿ’ ಪೆರುವಾಯಿ ಗ್ರಾ.ಪಂ ಉಪಾಧ್ಯಕ್ಷೆ ನಫೀಸಾರವರಿಗೆ ಶಾರ್ಜಾದಲ್ಲಿ ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಗ್ರಾಮದಲ್ಲಿ ತ್ಯಾಜ್ಯ ಸಂಗ್ರಹ ಮಾಡುವ ಸ್ವಚ್ಛ ವಾಹಿನಿ ವಾಹನವನ್ನು ಸ್ವತಃ ಚಲಾಯಿಸಿ ತ್ಯಾಜ್ಯ ಸಂಗ್ರಹಿಸುವ ಮೂಲಕ ಸುದ್ದಿಯಾಗಿದ್ದ ವಿಟ್ಲ ಸಮೀಪದ ಪೆರುವಾಯಿ ಗ್ರಾ.ಪಂ ಉಪಾಧ್ಯಕ್ಷೆ ನಫೀಸಾ ಪೆರುವಾಯಿ ಅವರಿಗೆ ಅಲ್ ಅಮೀನ್ ಕಮಿಟಿ ಯುಎಇ ವತಿಯಿಂದ ಶಾರ್ಜಾದಲ್ಲಿರುವ ಮೂಸಾರವರ ನಿವಾಸದಲ್ಲಿ ಸನ್ಮಾನ ಕಾರ್ಯಕ್ರಮ ಆ.೭ರಂದು ನಡೆಯಿತು. ಗ್ರಾ.ಪಂ ಉಪಾಧ್ಯಕ್ಷೆಯಾಗಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ನಫೀಸಾರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ ಅಮೀನ್ ಕಮಿಟಿಯ ಅಧ್ಯಕ್ಷ ರಿಯಾಝ್ ಮುಚ್ಚಿರಪದವು, ಕಾರ್ಯದರ್ಶಿ ಸಮೀರ್ ದರ್ಖಾಸ್ ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮೊದಲ ಬಾರಿ ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿ ವಿಜಯಿಯಾಗಿರುವ ನಫೀಸಾರವರು ಮೊದಲ ಅವಧಿಯಲ್ಲೇ ಪೆರುವಾಯಿ ಗ್ರಾ.ಪಂ.ನ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ಗ್ರಾ.ಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ಚಾಲಕಿಯಾಗಿ ಮನೆ, ಮನೆಗೆ ತೆರಳಿ ಕಸ ಸಂಗ್ರಹಿಸಿ ತಾಜ್ಯ ವಿಲೇವಾರಿ ಘಟಕಕ್ಕೆ ಕೊಂಡೊಯ್ಯುವ ಮೂಲಕ ನಫೀಸಾರವರು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದರು. ಅನೇಕ ಪತ್ರಿಕೆ ಮತ್ತು ಚಾನೆಗಳಲ್ಲೂ ಇವರ ಬಗ್ಗೆ ವರದಿ ಬಿತ್ತರಗೊಂಡಿತ್ತು.
ಇತ್ತೀಚೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಫೀಸಾರವರನ್ನು ಸನ್ಮಾನಿಸಿ ಅವರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.