ಪುತ್ತೂರಿನಲ್ಲಿ ಭಾರತ್ ಸ್ಕೌಟ್ಸ್, ಗೈಡ್ಸ್ ಸ್ಥಳೀಯ ಸಂಸ್ಥೆಯ ಸ್ಕೌಟಿಂಗ್ ಸೆಂಟರ್ ಉದ್ಘಾಟನೆ : ಸ್ಕೌಟ್ಸ್, ಗೈಡ್ಸ್ ಸೇರಿದರೆ ರಾಷ್ಟçಪತಿ ಪುರಸ್ಕಾರ ಪಡೆಯಲು ಸಾಧ್ಯತೆ – ಸಂಜೀವ ಮಠಂದೂರು

0

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪುತ್ತೂರು ಇದರ ನೂತನ ಸ್ಕೌಟಿಂಗ್ ಸೆಂಟರ್ ಉದ್ಘಾಟನಾ ಸಮಾರಂಭವು ಆ.8 ರಂದು ಬೊಳುವಾರು ಶಾಲಾ ವಠಾರದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿದರು.
ಸ್ಕೌಟ್ಸ್ಗೈಡ್ಸ್ ಸೇರಿದರೆ ರಾಷ್ಟ್ರಪತಿ ಪುರಸ್ಕಾರ ಪಡೆಯಲು ಸಾಧ್ಯತೆ:
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ದೇಶ ಸ್ವಾತಂತ್ರ್ಯದ 75ನೇ ಸಂಭ್ರಮದಲ್ಲಿದೆ. ದೇಶದಲ್ಲಿ ಬಹಳಷ್ಟು ಅಭಿವೃದ್ಧಿ ಕಂಡಿದೆ. ಬೇರೆ ಬೇರೆ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಕಂಡಿದೆ. ಹಾಗಾಗಿ ದೇಶಕ್ಕೆ ದೊಡ್ಡ ಕೊಡುಗೆ ಕೊಡಬೇಕಾದರೆ. ಶಿಸ್ತು ಬದ್ಧವಾದ ಜೀವನ ವಿದ್ಯಾರ್ಥಿಗಳಲ್ಲಿ ಮೂಡಬೇಕು. ಈ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆ ಜೊತೆಗೆ ಒಂದಷ್ಟು ಶಿಸ್ತಿನ ಸಮಾಜಿಕ ಅರಿವನ್ನು ಮೂಡಿಸುವ ಕೆಲಸ ಮಾಡುತ್ತದೆ. ಎಳೆವೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಸ್ಕೌಟ್ಸ್, ಗೈಡ್ಸ್ ಸೇರಿದರೆ ರಾಷ್ಟ್ರಪತಿ ಪುರಸ್ಕಾರ ಪಡೆಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ರಾಷ್ಟ್ರಭಕ್ತಿಯನ್ನು ಉದ್ದೀಪನ ಮಾಡುವ ಕೆಲಸ ಇಲ್ಲಿಂದ ಆಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಶಿಸ್ತುಬದ್ಧ ಸೇವೆಗೆ ಸ್ಥಳೀಯ ಸಂಸ್ಥೆಗಳು ಅಗತ್ಯ:
ಸಹಾಯಕ ಕಮೀಷನರ್ ಗಿರೀಶ್‌ನಂದನ್ ಅವರು ಮಾತನಾಡಿ ಜೀವನದಲ್ಲಿ ಶಿಸ್ತು ಅತ್ಯಗತ್ಯ. ರಾಷ್ಟ್ರದ ಅಭಿವೃದ್ಧಿಗೆ ಶಿಸ್ತುಬದ್ಧವಾದ ಸೇವೆ ಸಲ್ಲಿಸುವ ವ್ಯಕ್ತಿಗಳು, ನಾಯಕತ್ವದ ಗುಣಗಳನ್ನು ದೇಶಪ್ರೇಮ ಅಗತ್ಯ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆ ಮಹತ್ವದ ಕೆಲಸ ಮಾಡುತ್ತಿದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅದ್ಯಕ್ಷ ರೇ ವಿಜಯ ಹಾರ್ವೀನ್ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸ್ಥಳೀಯ ಸದಸ್ಯ ಸಂತೋಷ್ ಬೊಳುವಾರು, ಶಾಲಾ ಮುಖ್ಯಗುರು ನಿವೇದಿತ, ಸ್ಥಳೀಯ ಸಂಸ್ಥೆಯ ಜಿಲ್ಲಾ ಸಂಘಟನಾ ಆಯುಕ್ತ ಭರತ್ ರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೀಡರ್ ಟ್ರೈನರ್ ಸುನಿತಾ ಅತಿಥಿಗಳನ್ನು ಗೌರವಿಸಿದರು. ಸ್ಥಳೀಯ ಸಂಸ್ಥೆ ಕಾರ್ಯಾಧ್ಯಕ್ಷ ಶ್ರೀಧರ್ ರೈ ಸ್ವಾಗತಿಸಿದರು. ಕಾರ್ಯದರ್ಶಿ ವಿದ್ಯಾ ಗೌರಿ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಎಂ.ಜಿ ಕಜೆ, ಸ್ಥಳೀಯ ಸಂಸ್ಥೆಯ ನೂತನ ಉಪಾಧ್ಯಕ್ಷರಾದ ಡಾ.ಶ್ರೀಪ್ರಕಾಶ್, ಚಂದ್ರಶೇಖರ್, ಜೇವಿಯರ್ ಡಿ ಸೋಜ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೊಳುವಾರಿಗೆ ಮಹಿಳಾ ಪ್ರಥಮ ದರ್ಜೆ ಕಾಲೇಜು
ಪುತ್ತೂರಿನಲ್ಲಿ ಹಲವು ವರ್ಷಗಳಿಂದ ಸ್ವಂತ ನೆಲೆಯಿಲ್ಲದೆ ಇರುವ ಪ್ರಥಮ ದರ್ಜೆ ಮಹಿಳಾ ಕಾಲೇಜು ಬೊಳುವಾರಿಗೆ ಬರಲಿದೆ. ಈ ಕುರಿತು ಈಗಾಗಲೇ ಸರಕಾರದ ಒಪ್ಪಿಗೆ ಕಾರ್ಯಗತವಾಗುತ್ತಿದೆ. ಇಲ್ಲಿ ಸುವ್ಯವಸ್ಥಿತ 3 ಅಂತಸ್ತಿನ ಕಟ್ಟಡ ನಿರ್ಮಾಣ ಆಗಲಿದೆ. ರೂ. 5 ಕೋಟಿ ಅನುದಾನ ಈಗಾಗಲೇ ಬಂದಿದೆ. ಹಾಗೆಂದು ಇಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಟ್ಟಡಕ್ಕೆ ಯಾವುದೇ ತೊಂದರೆ ಆಗುವುದಿಲ್ಲ.- ಸಂಜೀವ ಮಠಂದೂರು, ಶಾಸಕರು ಪುತ್ತೂರು

LEAVE A REPLY

Please enter your comment!
Please enter your name here