ವಿಟ್ಲ: ಗುಡ್ಡವೊಂದರಲ್ಲಿ‌ ವ್ಯಕ್ತಿಯ ತಲೆಬುರುಡೆ ಪತ್ತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ.

ಆ.8ರಂದು ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಮಂದಿಗೆ ತಲೆಬುರುಡೆ, ಎಲುಬು ಹಾಗೂ ಆ ವ್ಯಕ್ತಿ‌ ಧರಿಸಿರುವುದಾಗಿ ಸಂಶಯಿಸಲ್ಪಟ್ಟ ಬಟ್ಟೆ ಕಾಣಸಿಕ್ಕಿದೆ. ಬಳಿಕ ಅವರು ಮರಳಿಬಂದು ಮನೆಮಂದಿಗೆ ವಿಚಾರ ತಿಳಿಸಿದ್ದಾರೆ. ರಾತ್ರಿ‌ ವೇಳೆ ಅವರು ಈ ವಿಚಾರವನ್ನು ವಿಟ್ಲ ಠಾಣಾ ಪೊಲೀಸರಿಗೆ ತಿಳಿಸಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. ತಲೆಬುರುಡೆ ಪತ್ತೆಯಾದ ಪ್ರಕರಣ ನಾಗರೀಕರಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.