ಕೆಎಸ್ಸಾರ್ಟಿಸಿ ವಾಣಿಜ್ಯ ಸಂಕೀರ್ಣದ ಮೆಟ್ಟಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ

0

ಪುತ್ತೂರು: ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬರು ಮೆಟ್ಟಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಘಟನೆ ಆ.9ರಂದು ರಾತ್ರಿ ನಡೆದಿದೆ.
ಬಿಳಿ ಪಂಚೆ ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬರು ಕೆಎಸ್ಸಾರ್ಟಿಸಿ ವಾಣಿಜ್ಯ ಸಂಕೀರ್ಣದ ಮೆಟ್ಟಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಮೆಟ್ಟಲಿನಿಂದ ಬಿದ್ದ ಅವರಿಗೆ ತಲೆಗೆ ಗಾಯವಾಗಿದೆ. ತಕ್ಷಣ ಸ್ಥಳೀಯ ವ್ಯಾಪಾರಸ್ಥರು ಸೇರಿ 108 ಆ್ಯಂಬುಲೆನ್ಸ್ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here