ಆ.12:ಫಿಲೋಮಿನಾ ಪಿಯು ಕಾಲೇಜ್ ಆಶ್ರಯದಲ್ಲಿ ಪಿಯುಸಿ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಚಾಂಪಿಯನ್‌ಶಿಪ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‌ನ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ದ.ಕ ಜಿಲ್ಲಾ ಮಟ್ಟದ ಈಜು ಚಾಂಪಿಯನ್‌ಶಿಪ್-೨೦೨೨ ಸ್ಪರ್ಧೆಯು ಆ.೧೨ ರಂದು ಪುತ್ತೂರು, ಪರ್ಲಡ್ಕ ಡಾ|ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ಜರಗಲಿದೆ.

ಬೆಳಿಗ್ಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಯಿದೆ ದೇವುಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ಅಧ್ಯಕ್ಷತೆ ವಹಿಸಲಿದ್ದು, ಗೌರವ ಅತಿಥಿಗಳಾಗಿ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್‌ರವರು ಭಾಗವಹಿಸಲಿರುವರು. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾದ ವಂ|ಅಶೋಕ್ ರಾಯನ್ ಕ್ರಾಸ್ತಾರವರು ಅಧ್ಯಕ್ಷತೆ ವಹಿಸಲಿದ್ದು, ಪುತ್ತೂರು ಡ್ಯಾಶ್ ಮಾರ್ಕೆಟಿಂಗ್ ಕಂಪೆನಿಯ ನಿಹಾಲ್ ಪಿ.ಶೆಟ್ಟಿ, ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎವರೆಸ್ಟ್ ರೊಡ್ರಿಗಸ್‌ರವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.