ಆ.13- ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ” ಶೀಂಟೂರು ಸ್ಮೃತಿ”

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಿವೃತ್ತ ಸೇನಾನಿ, ಶಿಕ್ಷಕ ದಿ.ಶೀಂಟೂರು ನಾರಾಯಣ ರೈಯವರ ” ಶೀಂಟೂರು ಸ್ಮೃತಿ ” ಕಾರ್‍ಯಕ್ರಮ ಆ. 13 ರಂದು ಬೆಳಿಗ್ಗೆ 10 ರಿಂದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ಜರಗಲಿದೆ.

ಮಂಗಳೂರಿನ ಲಕ್ಷ್ಮಿ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ ಶಾರದಾ ಎ.ಜೆ.ಶೆಟ್ಟಿರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್‍ಯಕ್ರಮ ಉದ್ಘಾಟಿಸಲಿದ್ದಾರೆ. ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್‌ರವರು ಸನ್ಮಾನವನ್ನು ನಡೆಸಿಕೊಡಲಿದ್ದಾರೆ. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ನಿವೃತ್ತ ಆರೋಗ್ಯಾಧೀಕಾರಿ ಡಾ.ಎಸ್.ರಂಗಯ್ಯರವರು ಪ್ರಧಾನ ಭಾಷಣ ಮಾಡಲಿದ್ದಾರೆ. ಭಾರತೀಯ ವಾಯುಸೇನೆಯ ನಿವೃತ್ತ ಸಾರ್ಜಂಟ್ ಕೆ. ಬಾಲಕೃಷ್ಣ ಶೆಟ್ಟಿ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮದನ ಪೂಜಾರಿರವರುಗಳಿಗೆ ಶೀಂಟೂರು ಸನ್ಮಾನ ಪುರಸ್ಕಾರ ನಡೆಯಲಿದೆ. ನಿವೃತ್ತ ಪ್ರಾಥಮಿಕ ಆರೋಗ್ಯ ಸಂರಕ್ಷಾಧಿಕಾರಿ ವಾಗೀಶ್ವರಿ ಕೆ ಮತ್ತು ರಾಯಚೂರು ಖಾನಪೂರ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಡಾ.ದಂಡಪ್ಪ ಬಿರಾದಾರರವರುಗಳಿಗೆ ವಿದ್ಯಾರಶ್ಮಿ ಗೌರವ ಪುರಸ್ಕೃರ ನಡೆಯಲಿದೆ. ಶೀಂಟೂರು ನಾರಾಯಣ ರೈಯವರ ಪ್ರತಿಮೆಗೆ ಹಾರಾರ್ಪಣೆಯನ್ನು ಎಸ್‌ಎನ್‌ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ ಸವಣೂರು ಎನ್ ಸುಂದರ ರೈಯವರು ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ 2021-22 ನೇ ಸಾಲಿನ ಹತ್ತು ಮಂದಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಿಷ್ಯವೇತನವನ್ನು ಪಡೆಯಲಿದ್ದಾರೆ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಕೆ.ಸೀತಾರಾಮ ರೈಯವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.