ಗೋಲ್ಡನ್ ಸ್ಟಾರ್ ಗಣೇಶ್, ಯೋಗರಾಜ್ ಭಟ್ ಕಾಂಬಿನೇಶನ್‌ನ ಗಾಳಿಪಟ 2 ನಾಳೆಯಿಂದ (ಆ.12) ಅರುಣಾ ಚಿತ್ರಮಂದಿರದಲ್ಲಿ

0

ಪುತ್ತೂರು: ಯೋಗರಾಜ್ ಭಟ್ ಹಾಗೂ ಗಣೇಶ್ ಕಾಂಬಿನೇಶನ್‌ನಲ್ಲಿ ಈ ಹಿಂದೆ ಬಿಡುಗಡೆಯಾಗಿದ್ದ `ಗಾಳಿಪಟ’ ಚಿತ್ರ ಹಿಟ್ ಆಗಿತ್ತು. ಈಗ ಅದೇ ಜೋಡಿ ಮತ್ತೂಮ್ಮೆ ಜೊತೆಯಾಗಿ `ಗಾಳಿಪಟ-2′ ಮಾಡಿದ್ದಾರೆ. ಚಿತ್ರವು ಆ.12 ರಂದು ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದ್ದು ಪುತ್ತೂರು ಅರುಣಾ ಚಿತ್ರಮಂದಿರದಲ್ಲೂ ಚಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ನಡಿ ಉಮಾ ಮತ್ತು ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಮತ್ತು ಪವನ್ ಕುಮಾರ್ ನಾಯಕರಾಗಿ ನಟಿಸಿದ್ದಾರೆ. ಚಿತ್ರಕ್ಕೆ ನಾಯಕಿಯರಾಗಿ ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ ಮತ್ತು ಸಂಯುಕ್ತಾ ಮೆನನ್ ನಟಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅನಂತನಾಗ್ ಮತ್ತು ರಂಗಾಯಣ ರಘು ಪ್ರಮುಖ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆ ಎನ್ನಲಾಗಿದೆ.

ದಿನಾ 4 ದೇಖಾವೆಗಳು

ಅರುಣಾ ಚಿತ್ರಮಂದಿರದಲ್ಲಿ ಬೆಳಿಗ್ಗೆ 11, ಮಧ್ಯಾಹ್ನ 2, ಸಂಜೆ 6 ಮತ್ತು ರಾತ್ರಿ 9 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಚಿತ್ರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಟಾಕೀಸ್‌ಗೆ ಬಂದು ಸಿನಿಮಾ ನೋಡಿ ಪ್ರೋತ್ಸಾಹಿಸುವಂತೆ ಚಿತ್ರಮಂದಿರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here