ಆ.14ಕ್ಕೆ ಪುತ್ತೂರು ಬಿಜೆಪಿಯಿಂದ ಶೋಭಾಯಾತ್ರೆ – 4 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ

0

ಪುತ್ತೂರು: ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಪ್ರಧಾನಿಯವರ ಉದ್ದೇಶದಂತೆ ಪ್ರತಿಯೊಬ್ಬ ನಾಗರಿಕನು ಕೂಡಾ ರಾಷ್ಟ್ರಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಮತ್ತು ಪಕ್ಷಕ್ಕಿಂತ ದೇಶ ದೊಡ್ಡ ಎಂಬ ನೆಲೆಯಲ್ಲಿ ಬಿಜೆಪಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ವತಿಯಿಂದ ಆ.14ಕ್ಕೆ ಪುತ್ತೂರಿನಲ್ಲಿ ಶೋಭಾಯತ್ರೆ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


ಈಗಾಗಲೇ ಮೂರು ದಿವಸ ಎಲ್ಲರು ತಮ್ಮ ತಮ್ಮ ಮನೆಯಲ್ಲಿ ಧ್ವಜಾರೋಹಣ ಮಾಡಿ ರಾಷ್ಟ್ರಕ್ಕಾಗಿ ಯಾರೆಲ್ಲ ಬಲಿದಾನ ಆಗಿದ್ದಾರೋ ಅವರನ್ನು ಸ್ಮರಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ಪ್ರತಿ ಮನೆಯಲ್ಲೂ ಹರ್ ಘರ್ ತಿರಂಗ ಸಂದೇಶ ನೀಡುವಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ 120 ಬೂತ್‌ಗಳಲ್ಲಿ ನಮ್ಮ ಕಾರ್ಯಕರ್ತರು ಮನೆ ಮನೆಗೆ ಹೋಗಿ ತ್ರಿವರ್ಣ ಧ್ವಜ ವಿತರಿಸಿದ್ದಾರೆ. ಆ.14ಕ್ಕೆಶೋಭಾ ಯಾತ್ರೆಯು ಬೆಳಿಗ್ಗೆ ಗಂಟೆ 9ಕ್ಕೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯ ವೃತ್ತದಿಂದ ಹೊರಟು ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣದ ಬಳಿಯ ಗಾಂಧಿಕಟ್ಟೆಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡಿ ನಂತರ ಕೋರ್ಟ್ ರಸ್ತೆಯಾಗಿ ಕಿಲ್ಲೆ ಮೈದಾನದ ಬಳಿ ಅಮರ್ ಜವಾನ್ ಸ್ಮಾರಕ ಜ್ಯೋತಿಯಲ್ಲಿ ವೀರ ಯೋಧರಿಗೆ ಗೌರವ ಸಲ್ಲಿಸುವ ಮೂಲಕ ಸಂಪನ್ನಗೊಳ್ಳುವುದು ಎಂದು ಅವರು ಹೇಳಿದರು.

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲ 50ಸಾವಿರ ಧ್ವಜ ನೀಡಿಕೆ:
ಬಿಜೆಪಿ ಕಾರ್ಯಕರ್ತರು ಈಗಾಗಲೇ 10 ಸಾವಿರ ಧ್ವಜ ಮನೆ ಮನೆಗೆ ಹಸ್ತಾಂತರ ಮಾಡುತ್ತಿದ್ದಾರೆ. ಇದರ ಜೊತೆಗೆ ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ 5ಸಾವಿರ, ಕ್ಷೇತ್ರ ಶಿಕ್ಷಣಾಧಿಕಾರಿ, ಪಂಚಾಯತ್, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಅಂಚೆ ಇಲಾಖೆಗಳು ಐದು, ಹತ್ತು ಸಾವಿರ ಧ್ವಜ ತರಿಸಿದ್ದಾರೆ. ಒಟ್ಟು ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 50 ಸಾವಿರ ಧ್ವಜ ಪ್ರತಿ ಮನೆಗೆ ವಿತರಣೆ ಮಾಡಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಪತ್ರಿಕಾಗೊಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬೂಡಿಯಾರ್ ರಾಧಾಕೃಷ್ಣ ರೈ, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here