ಆ.13:ಫಿಲೋಮಿನಾ ಪಿಯು ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ದರ್ಬೆ ಫಿಲೋನಗರದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೨-೨೩ನೇ ಸಾಲಿನ ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವು ಆ.೧೩ ರಂದು ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ಬೆಳಿಗ್ಗೆ ನಡೆಯಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ವಹಿಸಿಕೊಳ್ಳಲಿರುವರು. ಸಮಾರಂಭದಲ್ಲಿ ನಡೆಯುವ `ವಿದ್ಯಾರ್ಥಿಗಳ ಜೀವನದಲ್ಲಿ ಪೋಷಕರ ಜವಾಬ್ದಾರಿ’ ಚಿಂತನ ಕಾರ್ಯಕ್ರಮವನ್ನು ನಿವೃತ್ತ ಮುಖ್ಯಗುರು ವಿನ್ಸೆಂಟ್ ಫೆರ್ನಾಂಡೀಸ್‌ರವರು ನಡೆಸಿಕೊಡಲಿದ್ದಾರೆ. ಗೌರವ ಉಪಸ್ಥಿತಿಯಾಗಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್‌ರವರು ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳ ಹೆತ್ತವರು ಹಾಗೂ ಪೋಷಕರು ಕ್ಲಪ್ತ ಸಮಯಕ್ಕೆ ಆಗಮಿಸಿ ವಿದ್ಯಾರ್ಥಿಗಳ ಹಾಗೂ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಕೈಜೋಡಿಸುವಂತೆ ಕಾಲೇಜಿನ ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಕಾರ್ಯದರ್ಶಿ ಯಶವಂತ್ ಎಂ.ಡಿ, ಕೋಶಾಧಿಕಾರಿ ಸಂಜಯ್ ಎಸ್.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.