ಕೆದಂಬಾಡಿ ಗ್ರಾಪಂನಿಂದ ಸ್ವಾತಂತ್ರ್ಯ ಹಬ್ಬ, ವಿವಿಧ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

  • ಆ.14: ಅಮೃತ ಓಟ, ಆ.15: ಅಮೃತ ಸರೋವರಕ್ಕೆ ಶಿಲಾನ್ಯಾಸ, ಚೆಕ್ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆ.11 ರಿಂದ 15 ರವರೇಗೆ 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಾತಂತ್ರ‍್ಯ ಹಬ್ಬ, ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಆ.11 ರಂದು ಸಾರೆಪುಣಿ ಪ್ರಯಾಣಿಕರ ತಂಗುದಾಣದಲ್ಲಿ ಪುಸ್ತಕ ಗೂಡು ಲೋಕಾರ್ಪಣೆ, ಕೆದಂಬಾಡಿ ಸರಕಾರಿ ಹಿಪ್ರಾ ಶಾಲೆಯಲ್ಲಿ ನಿರ್ಮಿಸಲಾದ ಶೌಚಾಲಯದ ಉದ್ಘಾಟನೆ ನಡೆಯಿತು. ಆ.12 ರಂದು ಗ್ರಾಪಂ ವ್ಯಾಪ್ತಿಯ 1 ರಿಂದ 4 ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜದ ಚಿತ್ರ ಬಿಡಿಸುವ ಸ್ಪರ್ಧೆ, 3 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ನಡೆಯಿತು.
ಆ.15 ಅಮೃತ ಸರೋವರಕ್ಕೆ ಶಿಲಾನ್ಯಾಸ, ಚೆಕ್ ವಿತರಣೆ

ಆ.15 ರಂದು ಬೆಳಿಗ್ಗೆ ಬೋಳೋಡಿಯಲ್ಲಿ ಅಮೃತ ಸರೋವರ ಕಾಮಗಾರಿಗೆ ಶಿಲಾನ್ಯಾಸ ನಡೆಯಲಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಡಮಜಲು ಸುಭಾಷ್ ರೈ ಶಿಲಾನ್ಯಾಸ ನೆರವೇರಿಸಲಿದ್ದು, ಉದ್ಯಮಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೆದಂಬಾಡಿ ಶಾಲೆಯಿಂದ ಸಾರೆಪುಣಿ ತನಕ ಕೆದಂಬಾಡಿ ಶಾಲಾ ಮಕ್ಕಳಿಂದ ಸ್ವಾತಂತ್ರ‍್ಯ ಜಾಥ, ತಿಂಗಳಾಡಿ ಶಾಲೆಯಿಂದ ಗ್ರಾಮ ಪಂಚಾಯತ್‌ವರೇಗೆ ತಿಂಗಳಾಡಿ ಶಾಲಾ ಮಕ್ಕಳಿಂದ ಸ್ವಾತಂತ್ರ‍್ಯ ಜಾಥಾ ನಡೆಯಲಿದೆ. ಆ ಬಳಿಕ ಕೆದಂಬಾಡಿ ಗ್ರಾಪಂನಲ್ಲಿ ಧ್ವಜಾರೋಹಣ ನಡೆಯಲಿದ್ದು ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಗ್ರಾಪಂ ಸಭಾಂಗಣದಲ್ಲಿ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಪ.ಜಾತಿ ಮತ್ತು ಪ.ಪಂಗಡದ 75 ವಿದ್ಯಾರ್ಥಿಗಳಿಗೆ ಸಹಾಯಧನ ಚೆಕ್ ವಿತರಣೆ ಹಾಗೂ ಗ್ರಾಪಂ ವ್ಯಾಪ್ತಿಯ ಶಾಲಾ ಮಕ್ಕಳಿಂದ ಸಾರ್ವಜನಿಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರ, ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ, ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ, ಕಾರ್ಯದರ್ಶಿ ಸುನಂದ ರೈ ಹಾಗೂ ಸರ್ವ ಸದಸ್ಯರ ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.

ನಾಳೆ ಅಮೃತ ಓಟ
ಶ್ರೀ ವಿಷ್ಣು ಯುವ ಶಕ್ತಿಬಳಗ ಮಜ್ಜಾರಡ್ಕ ಇವರಿಂದ ಅಮೃತ ಮಹೋತ್ಸವದ ಪ್ರಯುಕ್ತ ಕುಂಬ್ರದಿಂದ ತಿಂಗಳಾಡಿಯವರೇಗೆ ಅಮೃತ ಓಟ ನಡೆಯಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.