ಆ.13: ನೆಲ್ಯಾಡಿ ವಲಯ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ, ಸಾಧನ ಸಮಾವೇಶ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನೆಲ್ಯಾಡಿ ವಲಯದ ನೆಲ್ಯಾಡಿ, ಮಾದೇರಿ, ಕೌಕ್ರಾಡಿ ಹಾಗೂ ಪಡುಬೆಟ್ಟು ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಧನ ಸಮಾವೇಶ ಆ.13ರಂದು ಬೆಳಿಗ್ಗೆ 9.30ರಿಂದ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಖ್ಯಾತಿ ಜ್ಯೋತಿಷಿ ಶ್ರೀಧರ ಗೋರೆ ಅವರು ಉದ್ಘಾಟಿಸಲಿದ್ದಾರೆ. ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಪುತ್ತೂರು ಇದರ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ ಅಧ್ಯಕ್ಷತೆ ವಹಿಸಲಿದ್ದಾರೆ. ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್‌ರವರು ಜವಾಬ್ದಾರಿ ಹಸ್ತಾಂತರ ಮಾಡಲಿದ್ದಾರೆ. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ, ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಗಳ ಸಂಚಾಲಕ ಅಬ್ರಹಾಂ ವರ್ಗೀಸ್, ಜಿ.ಪಂ.ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಬಾಲಕೃಷ್ಣ ಬಾಣಜಾಲು, ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್, ನೋಟರಿ, ನ್ಯಾಯವಾದಿ ಇಸ್ಮಾಯಿಲ್ ಎನ್., ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷೇ ಚೇತನಾ, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷೆ ವನಿತಾ, ಜಲಸಂರಕ್ಷಣೆ ವಿಧಾನವಾದ ಮಳೆ ಕೊಯ್ಲು ಅಳವಡಿಕೆಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪಡೆದ ಪ್ರಗತಿಪರ ಕೃಷಿಕ ಡೇವಿಡ್ ಜೈಮಿ ಕೊಕ್ಕಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.