ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವಕ್ಕೆ ಚಾಲನೆ

0

* ಸಾಮೂಹಿಕ ರಕ್ತದಾನ ಶಿಬಿರ
* ಹರ್ ಘರ್ ತಿರಂಗಾ ಅಭಿಯಾನಕ್ಕೆ ಧ್ವಜ ವಿತರಣೆ

ಪುತ್ತೂರು:ದೇಶದೆಲ್ಲೆಡೆ ೭೬ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪುತ್ತೂರಿನಲ್ಲಿಯೂ ಸ್ವಾತಂತ್ರ್ಯದ ಸಂಭ್ರಮ ಮುಗಿಲು ಮುಟ್ಟಿದ್ದು ಸಂಪ್ಯದ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವವನ್ನು ಸಂಭ್ರಮಿಸಲಾಗುತ್ತಿದ್ದು ಆ.೧೩ರಂದು ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಆರೋಗ್ಯ ರಕ್ಷಾ ಸಮಿತಿ, ಸಂಪ್ಯ ನವಚೇತನ ಯುವಕ ಮಂಡಲ ಹಾಗೂ ಮುಕ್ರಂಪಾಡಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಆಶ್ರಯದಲ್ಲಿ ಮೂರು ದಿನಗಳ ಕಾಲ ಅಮೃತಮಹೋತ್ಸವದ ಸಂಭ್ರಮವನ್ನು ಆಚರಿಸಲಾಗುತ್ತಿದೆ. ದೇವಸ್ಥಾನವೊಂದರಲ್ಲಿ ಪ್ರಥಮ ಬಾರಿಗೆ ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಗುತ್ತಿದ್ದು, ಆ.೧೩ರಂದು ಸಾಮೂಹಿಕ ರಕ್ತದಾನ ಶಿಬಿರ, ಹರ್ ಘರ್ ತಿರಂಗಾ ಅಭಿಯಾನಕ್ಕೆ ಮನೆ ಮನೆಗಳಿಗೆ ರಾಷ್ಟ್ರಧ್ವಜ ವಿತರಣೆ ನಡೆಯಿತು. ಆ.೧೪ರಂದು ದೇವಸ್ಥಾನದ ಪರಿಸರದಲ್ಲಿ ಸ್ವಚ್ಚತಾ ಆಂದೋಲನ ಹಾಗೂ ಸಂಪ್ಯದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಕೆಸರುಗದ್ದೆ ಕ್ರೀಡಾಕೂಟ, ಆ.೧೫ರಂದು ಸ್ವಾತಂತ್ರ್ಯೋತ್ಸವ, ನಿವೃತ್ತ ಯೋಧರಿಗೆ ಸನ್ಮಾನ ನಡೆಯಲಿದೆ.

ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ ಮಾತನಾಡಿ, ಧಾರ್ಮಿಕ ಕೇಂದ್ರವನ್ನು ಕೇಂದ್ರವಾಗಿಸಿಕೊಂಡು ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳುವ ಮೂಲಕ ಜನರನ್ನು ಒಗ್ಗೂಡಿಸುವ ಮಹಾನ್ ಕಾರ್ಯವು ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ಮುಖಾಂತರ ನಡೆಯುತ್ತಿದೆ ಎಂದರು.

ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್‌ನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಮಾತನಾಡಿ, ರಕ್ತದಾನದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮುಕ್ರಂಪಾಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಸೋಮಶೇಖರ ರೈ ಅಧ್ಯಕ್ಷತೆ ವಹಿಸಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ನಗರ ಸಭಾ ಸದಸ್ಯ ಶೀನಪ್ಪ ನಾಯ್ಕ, ನವಚೇತನಾ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಸ್ವಾಗತಿಸಿದರು. ಸಂಚಾಲಕ ಅರುಣ್ ಕುಮಾರ್ ಪುತ್ತಿಲ ವಂದಿಸಿದರು. ಉಮೇಶ್ ಎಸ್.ಕೆ ವಂದಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ಲಕ್ಷ್ಮಣ್ ಬೈಲಾಡಿ, ಭೀಮಯ್ಯ ಭಟ್, ಜಯರಾಮ ಪೂಜಾರಿ ಟಿ., ಜಯಂತ ಶೆಟ್ಟಿ ಕಂಬಳತ್ತಡ್ಡ ಶಾಲು, ಸ್ಮರಣಿಕೆ ನೀಡಿ ಗೌರವಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುಮಾರು ೨೮ ಮಂದಿ ಭಕ್ತಾದಿಗಳು ಸಾಮೂಹಿಕ ರಕ್ತದಾನ ಮಾಡಿದರು. ನಗರ ಸಭಾ ಸದಸ್ಯ ಶೀನಪ್ಪ ನಾಯ್ಕ ಪಂಜಳ ಉಪಾಹಾರದ ಪ್ರಾಯೋಜಕರಾಗಿದ್ದರು.

LEAVE A REPLY

Please enter your comment!
Please enter your name here