ಸಂಸ್ಕೃತ ಭಾಷೆಯ ಉಳಿವಿಗಾಗಿ ಎಲ್ಲರೂ ಪ್ರಯತ್ನಿಸಬೇಕಾಗಿದೆ ಬಿಳಿನೆಲೆಯಲ್ಲಿ ನಡೆದ ಸಂಸ್ಕೃತ ಸಪ್ತಾಹದಲ್ಲಿ ರಘು ಬಿಜೂರ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಅಗಾಧ ಜ್ಞಾನ ಭಂಡಾರವನ್ನು ಹೊಂದಿರುವ ಸಂಸ್ಕೃತ ಭಾಷೆ ಎಲ್ಲಾ ಭಾರತೀಯ ಭಾಷೆಗಳ ಮಾತೃ ಸ್ಥಾನದಲ್ಲಿದೆ. ಅಂತಹ ಭಾಷೆ ಯಾವುದೇ ಒಂದು ಜನಾಂಗಕ್ಕೆ ಸೀಮಿತವಾಗಿರದೆ ವಿಶ್ವದಾದ್ಯಂತ ಪಸರಿಸಿದೆ. ನಮ್ಮ ಜೀವನದ ದಿಕ್ಕನ್ನು ಬದಲಿಸುವಂತಹ ಅನೇಕ ವಿಚಾರಗಳು ಸಂಸ್ಕೃತ ಭಾಷೆಯಲ್ಲಿ ಇದ್ದರೂ ಇದನ್ನು ಅಧ್ಯಯನ ಮಾಡುವವರ ಸಂಖ್ಯೆ ಮಾತ್ರ ಬಹಳ ವಿರಳವಾಗಿರುವುದು ದುಃಖದ ವಿಷಯ. ಭಾರತದ ಪ್ರಾಚೀನ ಭಾಷೆಯೂ, ಧಾರ್ಮಿಕ ಮಹತ್ವವನ್ನು ಹೊಂದಿರುವ ಸಂಸ್ಕೃತ ಭಾಷೆಯ ಉಳಿವಿಗಾಗಿ ಎಲ್ಲರೂ ಪ್ರಯತ್ನಿಸಬೇಕಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲೆಯ ಸಂಸ್ಕೃತ ಅಧ್ಯಾಪಕರಾಗಿರುವ ರಘು ಬಿಜೂರ್ ಹೇಳಿದರು.

ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇದರ ಜಂಟಿ ಆಶ್ರಯದಲ್ಲಿ ನಡೆದ ಸಂಸ್ಕೃತ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪ್ರೌಢಶಾಲಾ ಮುಖ್ಯ ಗುರು ಗಣಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೃಷ್ಣ ಶರ್ಮ, ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಗಿರೀಶ್ ಕಳಿಗೆ ಉಪಸ್ಥಿತರಿದ್ದರು. ಸಂಸ್ಕೃತ ಅಧ್ಯಾಪಕ ಸತ್ಯ ಶಂಕರ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವೇದವ್ಯಾಸ ವಿದ್ಯಾಲಯದ ಪ್ರಶಾಂತ್ ವಂದಿಸಿದರು. ಅಧ್ಯಾಪಕರಾದ ವಿನೋದ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಭಗವದ್ಗೀತೆ ಪಠಣ, ಸುಭಾಷಿತ ಪಠಣ, ಸಂಸ್ಕೃತ ಗಾಯನ ಮುಂತಾದ ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.