ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಗೆ ಹಲವು ಬಹುಮಾನಗಳು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಮಾತೃಸಂಸ್ಥೆ ನಟ್ಟೋಜ ಪೌಂಡೇಶನ್ ಟ್ರಸ್ಟ್ ಇವರು ಸ್ವಾತಂತ್ರೋತ್ಸವದ 75ನೇ ಅಮೃತಮಹೋತ್ಸವದ ಪ್ರಯುಕ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಗೆ ಹಲವು ಬಹುಮಾನ ಬಂದಿರುತ್ತದೆ.

ಸಮೂಹ ದೇಶ ಭಕ್ತಿಗೀತೆಯಲ್ಲಿ 10ನೇ ತರಗತಿಯ ರಚನಾ, 10ನೇ ತರಗತಿಯ ಐಶಿತಾ ರೈ, 9ನೇ ತರಗತಿಯ ಈಶಿತಾ, 8ನೇ ತರಗತಿಯ ರಾಶಿ ಕೆ.ಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಬಂಧ ಸ್ಪರ್ಧೆಯಲ್ಲಿ 10ನೇ ತರಗತಿಯ ಉತ್ತಮ್ ಜಿ ದ್ವಿತೀಯ ಸ್ಥಾನ ಹಾಗೂ ಭಾಷಣ ಸ್ಪರ್ಧೆಯಲ್ಲಿ 10ನೇ ತರಗತಿಯ ಶ್ರಾವ್ಯ ಕೆ.ಎಚ್ ದ್ವಿತೀಯ ಸ್ಥಾನದೊಂದಿಗೆ ಪ್ರಶಸ್ತಿ ಮತ್ತು ಟ್ರೋಫಿಯನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಶಿಕ್ಷಕಿ ವಿನಯ ವಿ.ಶೆಟ್ಟಿ ಮತ್ತು ಜಯಶೀಲ ಮಾರ್ಗದರ್ಶನ ನೀಡಿರುತ್ತಾರೆ. ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ.ಎಂ.ಬಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.