ಅಬೀರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬೀರ ಅಂಗನವಾಡಿ ಕೇಂದ್ರದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ದಿವ್ಯ ಚಿದಾನಂದ ಧ್ವಜಾರೋಹಣ ಮಾಡಿದರು. ಗ್ರಾಮ ಪಂಚಾಯತ್ ಪಂಚಾಯತ್ ಸದಸ್ಯರಾದ ಜಯಂತ ಅಬೀರ, ಗೌರಿ ಮಾದೋಡಿ, ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಉಪಾಧ್ಯಕ್ಷರಾದ ಸುಂದರ ಕಂಡೂರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಕಾವ್ಯ ಕಂಡೂರು, ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಬಾಲವಿಕಾಸ ಸಮಿತಿಯ ಸದಸ್ಯರು, ಊರಿನವರು ಉಪಸ್ಥಿತರಿದ್ದರು.ಅಂಗನವಾಡಿ ಕಾರ್ಯಕರ್ತೆ ಬೇಬಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here