ಕೆದಂಬಾಡಿ ಗ್ರಾಪಂನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ, ಧ್ವಜಾರೋಹಣ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನಲ್ಲಿ ೭೫ ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ದೇಶದ ಜನತೆಯೇ ಪಾಲ್ಗೊಂಡಿದ್ದು ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ. ಕೆದಂಬಾಡಿ ಗ್ರಾಮ ಪಂಚಾಯತ್ ಕೂಡ ಈ ನಿಟ್ಟಿನಲ್ಲಿ ಕೆಲಸ ಮಾಡಿದ್ದು ಗ್ರಾಮಸ್ಥರು ತಮ್ಮ ಮನೆಯಲ್ಲಿ ಧ್ವಜ ಹಾರಿಸುವ ಮೂಲಕ ಸಂಭ್ರಮಿಸಿದ್ದಾರೆ.ಗ್ರಾಮದ ಅಭಿವೃದ್ಧಿಗೆ ಗ್ರಾಪಂ ಎಲ್ಲಾ ರೀತಿಯ ಪ್ರಯತ್ನಗಳು ಮಾಡುತ್ತಿದ್ದು ಅಮೃತ ಗ್ರಾಮ ಯೋಜನೆಯಡಿ ಗ್ರಾಮದಲ್ಲಿ ಅಮೃತ ಸರೋವರದಿಂದ ಹಿಡಿದು ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆಯಲಿದೆ. ಇದಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದು ಹೇಳಿ ಶುಭಾಶಯಗಳನ್ನು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ ಅಬುದಾಭಿಯವರು ಮಾತನಾಡಿ, ಸ್ವಾತಂತ್ರ್ಯಕ್ಕೆ ಹೋರಾಡಿದವರು ಬಗ್ಗೆ ನಾವು ಸ್ಮರಣೆ ಮಾಡುತ್ತಾ ೭೫ ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಮಗೆಲ್ಲರಿಗೂ ಸಂಭ್ರಮವನ್ನು ತಂದುಕೊಟ್ಟಿದೆ ಎಂದು ಎಲ್ಲರಿಗೂ ಶುಭಾಶಯಗಳನ್ನು ಕೋರಿದರು. ನಾವು ಗಳಿಸಿದ್ದಲ್ಲಿ ಒಂದಂಶವನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮಾಡಬೇಕು ಎಂದು ಹೇಳಿ ಶುಭ ಹಾರೈಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಡಮಜಲು ಸುಭಾಷ್ ರೈ ಮುಖ್ಯ ಅತಿಥಿಯಾಗಿದ್ದರು.

ತಿಂಗಳಾಡಿ ಮತ್ತು ಕೆದಂಬಾಡಿ ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯ ಮೂಲಕ ಪಂಚಾಯತ್ ವಠಾರಕ್ಕೆ ಆಗಮಿಸಿ ದ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ ಹಾಗೂ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ನವೋದರ ರಿಕ್ಷಾ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ವರ್ತಕರ ಸಂಘದ ಪದಾಧಿಕಾರಿಗಳು ಅಲ್ಲದೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಶಿಕ್ಷಕ ವೃಂದವರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಸ್ವಾಗತಿಸಿ, ಕಾರ್ಯದರ್ಶಿ ಸುನಂದ ರೈ ವಂದಿಸಿದರು. ಸಿಬ್ಬಂದಿಗಳಾದ ಜಯಂತ ಮೇರ್ಲ, ಗಣೇಶ್, ಮೃದುಳಾ, ಶಶಿಪ್ರಭಾ ರೈ, ವಿದ್ಯಾಪ್ರಸಾದ್ ಸಹಕರಿಸಿದ್ದರು.

LEAVE A REPLY

Please enter your comment!
Please enter your name here