ಅಕ್ಷಯ ಕಾಲೇಜಿನಲ್ಲಿ 75ನೇ ವರ್ಷದ ಸ್ವಾತಂತ್ರೊತ್ಸವ ಆಚರಣೆ

0

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆ.15ರಂದು ೭೫ನೇ ವರ್ಷದ ಸ್ವಾತಂತ್ರೋತ್ಸವ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ರಚಿಸಿದ ಭಾರತ ರಂಗೋಲಿಯ ಸುತ್ತ ಹಣತೆಗಳನ್ನು ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರಿನ ಮಹಾವೀರ ಆಸ್ಪತ್ರೆಯ ಡಾ. ಸುರೇಶ್ ಪುತ್ತೂರಾಯ ಧ್ವಜರೋಹಣಗೈದು, ಉದ್ಘಾಟಿಸಿ ಮಾತನಾಡುತ್ತಾ ನಾನು ಎಂಬುದನ್ನು ಮರೆತು ನಾವು, ನಮ್ಮ ದೇಶ ಎಂಬುದನ್ನು ಮೈಗೂಡಿಸಿಗೊಂಡಾಗ ಭಾರತ ದೇಶವು ಉಜ್ವಲ ದೇಶವಾಗಿ ರೂಪುಗೊಳ್ಳಲು ಸಾಧ್ಯವಿದೆ . ನಾವು ಉದಾತ್ತ ಧ್ಯೇಯಗಳಿಂದ ಯೋಗ್ಯ ವ್ಯಕ್ತಿಗಳನ್ನು ನಮ್ಮ ಆದರ್ಶವಾಗಿಟ್ಟುಕೊಂಡು ಬೆಳೆಯಬೇಕು ಎಂದು ಹೇಳಿದರು.

ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಮಾತನಾಡಿ, ಅಕ್ಷಯ ಕಾಲೇಜಿನ ನೂತನ ಕ್ಯಾಂಪಸ್‌ನಲ್ಲಿ ಪ್ರಪ್ರಥಮ ಬಾರಿಗೆ ೭೫ವರ್ಷದ ಸ್ವಾತಂತ್ಯ ದಿನಾಚರಣೆಯನ್ನು ಆಚರಿಸಿರುವುದು ನಮ್ಮ ಹೆಮ್ಮೆ ಎಂದರು. ಈ ಸಂದರ್ಭದಲ್ಲಿ ಪುತ್ತೂರು ರೋಟರಿ ಕ್ಲಬ್ ಪೂರ್ವ ವತಿಯಿಂದ ಸರ್ವರಿಗೂ ವಿವಿಧ ಗಿಡಗಳನ್ನು ವಿತರಿಸಿ ವನಸಿರಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸಂಪತ್ ಪಕ್ಕಳ ಸ್ವಾಗತಿಸಿ, ಕಾಲೇಜಿನ ಅಧ್ಯಕ್ಷರು ವಂದಿಸಿದರು. ಸಮಾರಂಭದಲ್ಲಿ ಗವರ್ನಿಂಗ್ ಕೌನ್ಸಿಲ್ ಸದಸ್ಯರು, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಬೋಧಕ ಹಾಗೂ ಬೋಧಕಕೇತರ ಸಿಬ್ಬಂಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here