ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 9.30ಕ್ಕೆ ಮಹಾವಿದ್ಯಾಲಯದ ಆವರಣದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಕೇಶವಪ್ರಸಾದ್ ಮುಳಿಯ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ ಜ್ಞಾನಬಿಂಬ ಎಂಬ ಬಿತ್ತಿಪತ್ರಿಕೆಯ ಎರಡು ವಿಶೇಷ ಸಂಚಿಕೆಗಳನ್ನು ಬಿಡುಗಡೆಗೊಳಿಸಿದರು. ಮಾತನಾಡಿದ ಅವರು, ಭವ್ಯ ಭಾರತದ ಭವಿಷ್ಯವನ್ನು ಕಟ್ಟುವ ಮಹತ್ತರ ಜವಾಬ್ದಾರಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಯಶಸ್ವಿಯಾಗಿ ನಿರ್ವಹಿಸಬೇಕಾಗಿ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕರಾದ ವಿಜಯನಾರಾಯಣ ಕೆ ಎಂ ಮಾತನಾಡಿ, ಸ್ವದೇಶ ಪ್ರೇಮ ಬೆಳೆಸಿಕೊಂಡು ದೇಶದ ರಕ್ಷಣೆಗೆ ಕಟ್ಟಿಬದ್ದರಾಗೋಣ ಎಂದು ಕರೆ ನೀಡಿದರು. ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ರವೀಂದ್ರ ಬಿ.ಕೆ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ನಡೆಸಲಾದ ವಿಶೇಷ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.

ಮಹಾವಿದ್ಯಾಲಯದ ಎಲ್ಲಾ ಬೋಧಕ ಹಾಗೂ ಬೋಧಕೇತರ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಸೇರಿದ್ದರು. ವಿದ್ಯಾರ್ಥಿ ನಾಯಕ ನಿಶಾನ್ ಸ್ವಾಗತಿಸಿ, ವಿದ್ಯಾರ್ಥಿ ಶ್ರೀಕೃಷ್ಣ ಭಟ್ ವಂದಿಸಿದರು. ವಿದ್ಯಾರ್ಥಿನಿ ಜ್ಯೋತಿಕಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here