ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯದಿನ – ಪುಷ್ಪಾರ್ಚನೆ

0

ವಂಶಾಡಳಿತ, ಭ್ರಷ್ಟಾಚಾರದ ವಿರುದ್ಧ ಆಡಳಿತ ಮಾಡಿದವರು – ಸಂಜೀವ ಮಠಂದೂರು

ಪುತ್ತೂರು: ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಂಶಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ಆಡಳಿತ ಮಾಡಿದವರು. ಅವರ ಆಡಳಿತವನ್ನು ಸುಶಾಸನ ದಿನವನ್ನಾಗಿ ಆಚರಿಸುತ್ತೇವೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಆ.16 ರಂದು ನಡೆದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನದಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ ಅಟಲ್ ಬಿಹಾರಿ ವಾಜಪೇಯಿ ಅವರು ಇಡಿ ದೇಶವೇ ನನ್ನ ಮನೆ ಎಂದು ಬ್ರಹ್ಮಾಚಾರಿಯಾಗಿ ತನ್ನ ಸರ್ವಸ್ವವನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದರು. ತನ್ನ ಜೀವಿತಾವದಿ ತನಕ ಬಿಜೆಪಿಯನ್ನು ಬೆಳೆಸಿದ ಅವರು ಸುಮಾರು 40 ದಶಕಗಳ ಕಾಲ ರಾಜಕಾರಣದಲ್ಲಿ ಅವರು ತನ್ನದೇ ಆದ ಛಾಪನ್ನು ಮೂಡಿಸಿದರು. ಅವರೊಬ್ಬ ವ್ಯಕ್ತಿಯಾಗಿರದೆ ಶಕ್ತಿಯಾಗಿ ದೇಶದಲ್ಲಿ ರಾಜಕಾರಣಿಗಳು ಹೇಗಿರಬೇಕು. ಕಾರ್ಯಕರ್ತ ಹೇಗಿರಬೇಕೆಂದು ತೋರಿಸಿಕೊಟ್ಟರು ಎಂದು ಶಾಸಕ ಸಂಜೀವ ಮಠಂದೂರು ಅವರು ವಾಜಪೇಯಿ ಅವರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ನಾವು ಮುನ್ನಡೆಯಬೇಕೆಂದರು.

ಪುಷ್ಪಾರ್ಚನೆ:

ನುಡಿನಮನದ ಬಳಿಕ ಶಾಸಕ ಸಂಜೀವ ಮಠಂದೂರು ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಪಕ್ಷದ ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿದರು‌. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಶಾಂತಿವನ, ಯುವರಾಜ್, ಜಯಶ್ರೀ ಎಸ್ ಶೆಟ್ಟಿ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಮಂಡಲದ ಕಾರ್ಯದರ್ಶಿ ಹರಿಪ್ರಸಾದ್ ಯಾದವ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ್ ಗೌಡ ಇಚಿಲಂಪಾಡಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here