ಕೊಂಬೆಟ್ಟು ಅಂಗನವಾಡಿಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಕೊಂಬೆಟ್ಟು ಅಂಗನವಾಡಿ ಕೇಂದ್ರದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದೊಂದಿಗೆ ಆಚರಿಸಲಾಯಿತು. ಧ್ವಜಾರೋಹಣವನ್ನು ಪುತ್ತೂರು ಲಯನ್ಸ್ ಕ್ಲಬ್‌ನ ವತ್ಸಲಾರಾಜ್ಞಿ ನೆರವೇರಿಸಿ, ಶುಭಹಾರೈಸಿದರು.

ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್, ಬೊಳುವಾರು ವನಿತ ಸಮಾಜದ ಸದಸ್ಯೆ ಪ್ರೇಮಲತಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವಿಜಯ ಶಾಂತಿ, ಅಂಗನವಾಡಿ ಸಹಾಯಕಿ ಸ್ವರ್ಣಲತಾ, ಬಾಲವಿಕಾಸ ಸಮಿತಿ ಸದಸ್ಯರು, ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಪದಾಧಿಕಾರಿಗಳು, ಮಕ್ಕಳು, ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಡೀಲು ಅಂಗನವಾಡಿ ಕೇಂದ್ರದ ಶಿಕ್ಷಕಿ ರೋಹಿಣಿ ಧನ್ಯವಾದಗೈದರು. ಬಳಿಕ ಸಿಹಿ ತಿಂಡಿ ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here